ಬೆಳಗಾವಿ: ಬಿಮ್ಸ್ ವೈದ್ಯರ (BIMS Doctors) ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ಮಗು ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ.
ಬೆಳಗಾವಿ (Belagavi) ಜಿಲ್ಲೆಯ ತುರಮರಿ ಗ್ರಾಮದ ಬಾಣಂತಿ 21 ವರ್ಷದ ಈರಮ್ಮ ಶಿಗೀಹಳ್ಳಿ ಏಪ್ರಿಲ್ 10 ರಂದು ಮಧ್ಯಾಹ್ನ 12ಗಂಟೆಗೆ ಬೀಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಆಸ್ಪತ್ರೆಗೆ ದಾಖಲಾದಾಗಿಂದ ಇಲ್ಲಿಯವರೆಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: Mysuru | ಯುವಕನನ್ನ ಅಪಹರಿಸಿ ಬಲವಂತವಾಗಿ ಮಂಗಳಮುಖಿ ಮಾಡಿದ ಗ್ಯಾಂಗ್
ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ಮಧ್ಯರಾತ್ರಿ 1.30ಕ್ಕೆ ಬಾಣಂತಿ ಹಾಗೂ ಆಕೆಯ ಹೊಟ್ಟೆಯಲಿದ್ದ ನವಜಾತ ಹೆಣ್ಣು ಶಿಶು ಸಾವನ್ನಪ್ಪಿದೆ. ಹೀಗಾಗಿ ಬಾಣಂತಿ ಹಾಗೂ ಮಗುವಿನ ಸಾವಿಗೆ ನ್ಯಾಯ ಕೊಡಿ ಎಂದು ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.
ಬಿಮ್ಸ್ ಆಸ್ಪತ್ರೆಗೆ ಎಪಿಸಿಎಂಸಿ ಸಿಪಿಐ ಉಸ್ಮಾನ ಆವಟಿ, ಪಿಎಸ್ಐ ಸರ್ದಾರ್ ಮುತ್ತತರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಲಂಚ ಪಡೆಯುವಂತೆ PSI ಒತ್ತಡ – ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ


