ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ (Chikkamagaluru Taluk) ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.
ಲೇಖನಾ (10) ಮೃತ ದುರ್ದೈವಿ. ಪೋಷಕರು ಮನೆಯಲ್ಲಿ ಇಲ್ಲದ ವೇಳೆ ದುರ್ಘಟನೆ ನಡೆದಿದೆ. ಮನೆಯಲ್ಲಿ ಜೋಕಾಲಿ ಆಡುವಾಗ ಸೀರೆ ಉರುಳಾಗಿ ಬಾಲಕಿ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ
ಚಿಕ್ಕಮಗಳೂರು ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಇಬ್ಬರು ಮಹಿಳೆಯರು


