ಬೆಂಗಳೂರು: ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ (Abdul Jabbar) ಅವರನ್ನು ಕಾಂಗ್ರೆಸ್ನಿಂದ (Congress) ಅಮಾನತುಗೊಳಿಸಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ಆದೇಶ ಹೊರಡಿಸಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ
ಇತ್ತೀಚಿಗಷ್ಟೇ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಡಿಕೆ ಶಿವಕುಮಾರ್ ಅವರು ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದರು.
ಇದಕ್ಕೂ ಮುನ್ನ ಸುರ್ಜೇವಾಲಾ ಅವರು ಸಚಿವರಾದ ಜಮೀರ್ ಅಹಮದ್, ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮದ್ ವಿರುದ್ಧ ಎರಡು ಪುಟಗಳ ಸಂಪೂರ್ಣ ವರದಿ ಸಮೇತ ಹೈಕಮಾಂಡ್ಗೆ ದೂರು ಸಲ್ಲಿಸಿ, ಮೂವರ ವಿರುದ್ಧ ಕ್ರಮವಹಿಸುವಂತೆ ಉಲ್ಲೇಖಿಸಿದ್ದರು.

