ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

1 Min Read

ಬೆಂಗಳೂರು/ಯಾದಗಿರಿ: ಮುಖಾಮುಖಿ ಡಿಕ್ಕಿಯಾಗಿ ಕಾರು ಮತ್ತು ಖಾಸಗಿ ಬಸ್ ಹೊತ್ತಿಯುರಿದಿದ್ದು, 7 ಮಂದಿ ಸಜೀವ ದಹನವಾಗಿರುವ ಘಟನೆ ಯಾದಗಿರಿ  (Yadagiri) ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ.

ರಾಯಚೂರಿನ ಸಿರವಾರದ ಒಂದೇ ಕುಟುಂಬದವರಾದ ಕೃಷ್ಣಾ ನಾಯಕ್ (56), ಅವರ ಪತ್ನಿ ಅನಂತ ಕಲಾ (45), ನಿಸರ್ಗ (28), ಶರಣಪ್ಪ (35), ಸಿದ್ದಾರ್ಥ (3), ಅಣ್ಣನ ಮಗಳು ಶಶಿಕಲಾ (30) ಹಾಗೂ ಅವರ ಮಗ ಚಂದನ್‌ ಸಾವನ್ನಪ್ಪಿದ್ದಾರೆ. ಗಾಯಾಳುಗಳಾದ ಆದ್ವಿಕ ಮತ್ತು ಶ್ರೀನಿಧಿಯನ್ನ ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಕಾಫಿನಾಡು, ಮಲೆನಾಡಲ್ಲಿ ತಡರಾತ್ರಿ ಭಾರೀ ಮಳೆ – ಧರೆಗುರುಳಿದ ವಿದ್ಯುತ್‌ ಕಂಬ, ಮರಗಳು

ಕಾರಿನಲ್ಲಿ ಕುಟುಂಬಸ್ಥರು ಕಲಬುರಗಿಯಿಂದ ಸುರಪುರದ ತಿಂಥಣಿ ಮೌನೇಶ್ವರ ದೇವಾಲಯಕ್ಕೆ ತೆರಳುತ್ತಿದ್ದರು. ಇದೇ ವೇಳೆ ಖಾಸಗಿ ಬಸ್ ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿತ್ತು. ಈ ವೇಳೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಹಾಗೂ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರಿನಲ್ಲಿದ್ದ ಏಳು ಜನರು ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿ 33 ಜನ ಪ್ರಯಾಣಿಕರು ಪಾರಾಗಿದ್ದಾರೆ.

ಸದ್ಯ  ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನ ಸುರಪುರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.ಸುರಪುರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಬಂಜರು ಭೂಮಿಯ ಕಮಾಲ್‌ – ಒಂದು ಕೆಜಿ ಮಾವಿಗೆ 1 ಲಕ್ಷ ರೂ.

Share This Article