ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

0 Min Read

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ (Shri Kshetra Dharmasthala) ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ವಿಷು ಜಾತ್ರೆ ಪ್ರಯುಕ್ತ ನಡೆಯುವ ವಿಶೇಷ ಪೂಜಾ ಕಾರ್ಯಕ್ರಮಗಳ ಹಿನ್ನೆಲೆ, ಇಂದಿನಿಂದ ಏಪ್ರಿಲ್ 22ರವರೆಗೆ ಸಮಯ ಬದಲಾವಣೆ ಮಾಡಿರುವುದಾಗಿ ಆಡಳಿತ ಮಂಡಳಿ ತಿಳಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

ಬೆಳಗ್ಗೆ 8:30ರ ಬಳಿಕ ಮಾತ್ರ ದೇವರ ದರ್ಶನಕ್ಕೆ ಅವಕಾಶ ಇರುತ್ತದೆ. ರಾತ್ರಿ 8 ಗಂಟೆಯ ನಂತರ ದೇವಸ್ಥಾನದ ಹೊರಾಂಗಣದಿಂದ ಮಾತ್ರ ದರ್ಶನಕ್ಕೆ ಅವಕಾಶವಿದೆ. ಭಕ್ತಾದಿಗಳು ಸಹಕರಿಸಬೇಕು ಎಂದು ಮಂಡಳಿ ವಿನಂತಿಸಿದೆ.

Share This Article