ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

1 Min Read

– ಜಿಟಿಡಿ ನಮ್ಮ ಪಕ್ಷದಲ್ಲಿ ಇಲ್ಲ

ಮೈಸೂರು: ಸ್ಥಳೀಯ ಸಂಸ್ಥೆ ಚುನಾವಣೆ (Local Body Polls) ಮಾಡಲು ರಾಜ್ಯ ಸರ್ಕಾರಕ್ಕೆ ಭಯವಿದೆ ಎಂದು ಮಾಜಿ ಸಚಿವ ಸಾರಾ ಮಹೇಶ್ (SR Mahesh) ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಮಹಾ ನಗರ ಪಾಲಿಕೆ, ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಸೋಲುವುದು ಖಚಿತ. ಹೀಗಾಗಿ ಚುನಾವಣೆ ನಡೆಸುತ್ತಿಲ್ಲ. ಸಿಎಂ ಹಾಗೂ ಸಿಎಂ ಪುತ್ರ ಮಾತ್ರ ಅಧಿಕಾರದಲ್ಲಿ ಇದ್ದರೆ ಸಾಲದು. ಸ್ಥಳೀಯ ಮುಖಂಡರಿಗೂ ಅಧಿಕಾರ ಬೇಕು ಎಂದು ಕಿಡಿಕಾರಿದರು. ಇದನ್ನೂ ಓದಿ: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

ಜಿಟಿಡಿ ನಮ್ಮ ಪಕ್ಷದಲ್ಲಿ ಇಲ್ಲ. ಅವರ ಬಗ್ಗೆ ಏನೂ ಕೇಳಬೇಡಿ. ಹೆಚ್‌ಡಿ ಕುಮಾರಸ್ವಾಮಿ ಅವರೇ ಜಿಟಿಡಿ ನಮ್ಮ ಪಕ್ಷದಲ್ಲಿ ಇಲ್ಲ ಎಂದು ಹೇಳಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿಯಿತು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ ಸಮಾರೋಪ ಮಾಡುತ್ತೇವೆ ಎಂದರು. ಇದನ್ನೂ ಓದಿ: ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

ನಮ್ಮದು ಕುಟುಂಬ ರಾಜಕಾರಣ ಅಲ್ಲ ಎಂಬ ಸಿಎಂ ಪುತ್ರನ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ವಿಧಾನ ಪರಿಷತ್ ಸದಸ್ಯ, ಆಶ್ರಯ ಸಮಿತಿ ಸದಸ್ಯ, ಗ್ರೇಟರ್ ಬೆಂಗಳೂರು ಸಮಿತಿ ಸದಸ್ಯ ಎಲ್ಲವೂ ಯತೀಂದ್ರ ಆಗಿದ್ದಾರೆ. ಇದಕ್ಕಿಂತಾ ಕುಟುಂಬ ರಾಜಕಾರಣ ಬೇಕಾ ಎಂದು ತಿರುಗೇಟು ನೀಡಿದರು. ಜೆಡಿಎಸ್‌ಗೆ ಪಕ್ಷವೇ ಒಂದು ಕುಟುಂಬ. ಜೆಡಿಎಸ್‌ನಿಂದ ಬೆಳೆದು ಜೆಡಿಎಸ್‌ಗೆ ಬೈಯುವ ನಾಯಕರು ಹೆಚ್ಚಾಗಿದ್ದಾರೆ. ಹೀಗಾಗಿ ಹೆಚ್.ಡಿ. ದೇವೇಗೌಡರ ಕುಟುಂಬದವರನ್ನು ಹೆಚ್ಚಾಗಿ ಪಕ್ಷದಲ್ಲಿ ಬೆಳೆಸುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Share This Article