ನಾಟಕ ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು – ಇಬ್ಬರು ಮಕ್ಕಳು ಸಾವು, ನಾಲ್ವರು ಮಹಿಳೆಯರಿಗೆ ಗಂಭೀರ ಗಾಯ

1 Min Read

ರಾಯಚೂರು: ಬಯಲು ನಾಟಕ ನೋಡುತ್ತಿದ್ದವರ ಮೇಲೆ ಕಮಾನು ಗೋಡೆ ಕುಸಿದು ಬಿದ್ದು (Arch Collapses) ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ರಾಯಚೂರು (Raichur) ಜಿಲ್ಲೆಯ ಮಾನ್ವಿ (Manvi) ತಾಲೂಕಿನ ಬೈಲ್ ಮರ್ಚೆಡ್ ಗ್ರಾಮದಲ್ಲಿ ನಡೆದಿದೆ.

- Advertisement -

ಮೃತರನ್ನು ವಿಶ್ವನಾಥ್ (8) ಹಾಗೂ ಸಾನ್ವಿತ (2) ಎಂದು ಗುರುತಿಸಲಾಗಿದೆ. 7 ಜನರು ಕಮಾನು ಕೆಳಗೆ ಕುಳಿತು ನಾಟಕ ವೀಕ್ಷಿಸುತ್ತಿದ್ದರು. ಈ ವೇಳೆ ಕಮಾನಿನ ಗೋಡೆ ಕುಸಿದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಅವಘಡದಲ್ಲಿ ನಾಲ್ವರು ಮಹಿಳೆಯರಿಗೆ ಗಂಭೀರ ಗಾಯವಾಗಿದೆ. ಇದನ್ನೂ ಓದಿ: ಮೂರು ದಿನಗಳ ಆಪರೇಷನ್‌ ಯಶಸ್ವಿ – ನರಹಂತಕ ಕಾಡಾನೆ ಸೆರೆ

- Advertisement -

ಗಾಯಾಳುಗಳನ್ನು ಲಕ್ಷ್ಮಿ, ವಿಶಾಲಕ್ಷಿ, ಯಲ್ಲಮ್ಮ ಹಾಗೂ ಬಸಮ್ಮ ಎಂದು ಗುರುತಿಸಲಾಗಿದೆ. ಇವರಿಗೆ ಕಾಲು ಮುರಿದಿದೆ. ಬಸಮ್ಮ ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

- Advertisement -

ಮೃತದೇಹಗಳನ್ನು ಮಾನ್ವಿ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ – ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಬದುಕುಳಿದ 18ಕ್ಕೂ ಅಧಿಕ ಪ್ರಯಾಣಿಕರು

Share This Article