ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಮೋದಿ ಭಾಷಣ

0 Min Read

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ರಾತ್ರಿ 8:30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ ತಿದ್ದುಪಡಿ ಮಸೂದೆಗೆ ಸೋಲಾದ ಬೆನ್ನಲ್ಲೇ ಮೋದಿ ಭಾಷಣ (Speech) ತೀವ್ರ ಕುತೂಹಲ ಮೂಡಿಸಿದೆ.

ಮೋದಿ ಸರ್ಕಾರದ ಅಧಿಕಾರಕ್ಕೆ ಏರಿದ ಬಳಿಕ ಇಲ್ಲಿಯವರೆಗೆ ಯಾವುದೇ ಮಸೂದೆಗೆ ಸೋಲಾಗಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾದ ಹಿನ್ನೆಲೆಯಲ್ಲಿ ಭಾಷಣದಲ್ಲಿ ಯಾವ ವಿಷಯದ ಬಗ್ಗೆ ಮಾತನಾಡಬಹುದು ಎಂಬ ಪ್ರಶ್ನೆ ಎದ್ದಿದೆ.

ಈ ಹಿಂದೆ ನೋಟು ನಿಷೇಧ, ಕೋವಿಡ್‌ ಸಮಯದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಆದರೆ ಈಗ ಕೊಲ್ಲಿ ಯುದ್ಧ ನಡೆಯುತ್ತಿದ್ದರೂ ಸದ್ಯಕ್ಕೆ ನಿಂತಿದ್ದು ಅಮೆರಿಕ- ಇರಾನ್‌ ಜೊತೆ ಶಾಂತಿ ಮಾತುಕತೆ ಮತ್ತೆ ಆರಂಭವಾಗಿದೆ. ಈ ಕಾರಣಕ್ಕೆ ಮೋದಿ ಈ ವಿಚಾರದ ಬಗ್ಗೆ ಮಾತನಾಡುತ್ತಾರಾ? ಅಥವಾ ಬೇರೆ ವಿಷಯದ ಬಗ್ಗೆ ಮಾತನಾಡುತ್ತಾರಾ ಎಂಬ ಕುತೂಹಲ ಹೆಚ್ಚಾಗಿದೆ.

Share This Article