ಮಹಿಳಾ ಮೀಸಲಾತಿ ಅವರೊಬ್ಬರ ಆಸ್ತಿ ಅಲ್ಲ: ಬಿಜೆಪಿಗೆ ಡಿಕೆಶಿ ತಿರುಗೇಟು

1 Min Read

– ಸೋಲ್ತೀವಿ ಅಂತ ಗೊತ್ತಿದ್ದೂ ಬಿಲ್ ತಂದಿದ್ರು ಅಂತ ಡಿಸಿಎಂ ವಾಗ್ದಾಳಿ

ಬೆಂಗಳೂರು: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿಗೆ (Women’s Reservation) ಸೋಲು ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಬಿಜೆಪಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ತಿರುಗೇಟು ನೀಡಿದ್ದಾರೆ. ಮಹಿಳಾ ಮೀಸಲಾತಿ ಅವರೊಬ್ಬರ ಆಸ್ತಿ ಅಲ್ಲ ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.

ಮಹಿಳಾ ಮೀಸಲಾತಿ ವಿರೋಧಿಗಳು ಅವರು. ಸೋಲ್ತೀವಿ ಅಂತ ಗೊತ್ತಿದ್ದೂ ಬಿಲ್ ತಂದಿದ್ರು. ಪ್ರಜಾಪ್ರಭುತ್ವದಲ್ಲಿ ನಾವೆಲ್ಲ ಪ್ರತಿನಿಧಿಗಳಲ್ವಾ? ಇನ್ನೂ 240 ಜನ ನಾವು ಗೆದ್ದಿಲ್ವಾ? ಅವರ ಜೊತೆಗೆ ಬಿಲ್ ಬಗ್ಗೆ ಮಾತಾಡಬೇಕಿತ್ತು. ಯಾಕೆ ಮಾತಾಡಿಲ್ಲ? ಏನು ಮಾಡ್ತಿದ್ದೇವೆ ಎಂದು ಹೇಳಬೇಕಿತ್ತು. ಇದೆಲ್ಲದರ ಬಗ್ಗೆ ಚರ್ಚೆ ಮಾಡಬೇಕಿತ್ತು. ಮಹಿಳಾ ಮೀಸಲಾತಿ ಅವರೊಬ್ಬರ ಆಸ್ತಿ ಅಲ್ಲ ಎಂದು ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: 543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

ನಮ್ಮನ್ನ ಕರೆದು ಮಾತಾಡದೇ ಉತ್ತರ ಭಾರತದಲ್ಲಿ ಕ್ಷೇತ್ರಗಳನ್ನ ಜಾಸ್ತಿ ಮಾಡಿಕೊಳ್ಳಲು ಹೊರಟಿದ್ದರು. ದಕ್ಷಿಣ ಭಾರತ ಕ್ಷೇತ್ರ ಕಡಿಮೆ ಮಾಡಲು ಹೊರಟಿದ್ದರು. ಇದನ್ನು ಯಾರೂ ಸಹಿಸಲು ಸಾಧ್ಯವಿಲ್ಲ ಎಂದು ಹರಿಹಾಯ್ದಿದ್ದಾರೆ.

ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ದಕ್ಷಿಣ ಭಾರತದ ಎಂಪಿಗಳು ಪ್ರತಿಭಟನೆ ಮಾಡಿದ್ದಾರೆ. ಇದು ಪ್ರತಿಭಟನೆಗೆ ಸಿಕ್ಕ ದೊಡ್ಡ ಜಯ. ಅವಮಾನ ನಮಗೆ ಅಗಿರೋದಲ್ಲ. ಮಹಿಳಾ ಪರ ನಿಂತಿರೋದು ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟ ಎಂದು ಡಿಕೆಶಿ ತಿಳಿಸಿದ್ದಾರೆ. ಇದನ್ನೂ ಓದಿ: ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Share This Article