ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

2 Min Read

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್‌ (Congress) ಮತ್ತು ಸಿಪಿಎಂ (CPM) ಕೇಂದ್ರ ಚುನಾವಣಾ ಆಯೋಗಕ್ಕೆ(Election Commission) ಪ್ರತ್ಯೇಕ ದೂರು ನೀಡಿವೆ.

ಕೇರಳದ ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಅನಿಲ್ ಅಕ್ಕರ(Anil Akkara) ಮತ್ತು ಸಿಪಿಎಂ ರಾಜ್ಯಸಭಾ ಸದಸ್ಯ ಪಿ ಸಂತೋಷ್‌ ಕುಮಾರ್‌ (Santosh Kumar) ಅವರು ಭಾಷಣಕ್ಕಾಗಿ ಸರ್ಕಾರಿ ಸ್ವಾಮ್ಯದ ದೂರದರ್ಶನ (Doordarshan) ವಾಹಿನಿಯನ್ನು ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ದೂರಿನಲ್ಲಿ ಏನಿದೆ?
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಅಧಿಕಾರದಲ್ಲಿರುವ ಪಕ್ಷವು ಸರ್ಕಾರಿ ಮಾಧ್ಯಮಗಳನ್ನು ರಾಜಕೀಯ ಪ್ರಚಾರಕ್ಕಾಗಿ ಬಳಸುವಂತಿಲ್ಲ. ಆದರೆ ಪ್ರಧಾನಿಯವರು ತಮ್ಮ ರಾಜಕೀಯ ಭಾಷಣಕ್ಕಾಗಿ ಸರ್ಕಾರಿ ಸ್ವಾಮ್ಯದ ದೂರದರ್ಶನ (Doordarshan) ವಾಹಿನಿಯನ್ನು ಬಳಸಿಕೊಂಡಿದ್ದಾರೆ.

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲಾದ ನಂತರ ಪ್ರಧಾನಿಯವರು ದೇಶವನ್ನುದ್ದೇಶಿಸಿ ಮಾತನಾಡುತ್ತಾ, ನೇರವಾಗಿ ವಿರೋಧ ಪಕ್ಷಗಳನ್ನು ಹೆಸರಿಸಿ ವಾಗ್ದಾಳಿ ನಡೆಸಿದ್ದಾರೆ. ಇದು ಕೇವಲ ರಾಜಕೀಯ ಪ್ರೇರಿತ ಭಾಷಣವಾಗಿದ್ದು, ಚುನಾವಣಾ ಶಿಷ್ಟಾಚಾರದ ಗಂಭೀರ ಉಲ್ಲಂಘನೆಯಾಗಿದೆ. ಇದನ್ನೂ ಓದಿ: ಇದನ್ನೂ ಓದಿ: ಕಾಂಗ್ರೆಸ್‌ ಮಿತ್ರ ಪಕ್ಷಗಳಿಂದ ಭ್ರೂಣ ಹತ್ಯೆ – ದೇಶದ ಮಹಿಳೆಯರಲ್ಲಿ ಕ್ಷಮೆ ಕೇಳಿದ ಮೋದಿ

ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಗಳಲ್ಲಿ ಚುನಾವಣೆಗಳು ನಡೆಯುತ್ತಿದ್ದು, ಮೇ 6ರವರೆಗೆ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಂತದಲ್ಲಿ ಪ್ರಧಾನಿಯವರು ಇಂತಹ ಭಾಷಣ ಮಾಡಿರುವುದು ಮತದಾರರ ಮೇಲೆ ಪ್ರಭಾವ ಬೀರಿದಂತಾಗುತ್ತದೆ.  ಇದನ್ನೂ ಓದಿ: ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

ಸರ್ಕಾರದ ಅಧಿಕೃತ ವೇದಿಕೆಯನ್ನು ವಿರೋಧ ಪಕ್ಷಗಳನ್ನು ಟೀಕಿಸಲು ಬಳಸುವ ಮೂಲಕ ಚುನಾವಣಾ ವ್ಯವಸ್ಥೆಯಲ್ಲಿ ಅಭ್ಯರ್ಥಿಗಳ ನಡುವೆ ಇರಬೇಕಾದ ‘ಸಮಾನ ಅವಕಾಶ’ ನಿಯಮವನ್ನು ಉಲ್ಲಂಘಿಸಲಾಗಿದೆ. ಚುನಾವಣೆ ನಡೆಯುತ್ತಿರುವ ರಾಜ್ಯಗಳ (ತಮಿಳುನಾಡು, ಪಶ್ಚಿಮ ಬಂಗಾಳ ಇತ್ಯಾದಿ) ಮತದಾರರ ಮೇಲೆ ನೇರವಾಗಿ ಪ್ರಭಾವ ಬೀರುವಂತಹ ಆಯ್ದ ನಿರೂಪಣೆಗಳನ್ನು ಭಾಷಣದಲ್ಲಿ ಬಳಸಲಾಗಿದೆ.

ಈ ಭಾಷಣದಲ್ಲಿ ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಎಸ್‌ಪಿ ಹೆಸರನ್ನು ಪ್ರಸ್ತಾಪಿಸಿ ಟೀಕಿಸಿದ್ದು ಮತ್ತು ಮಹಿಳಾ ಮೀಸಲಾತಿ ಮಸೂದೆಯ ಸೋಲನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿದ್ದು ನೀತಿ ಸಂಹಿತೆಯ ರಾಜಕೀಯ ಪಕ್ಷಪಾತದ ಪ್ರಚಾರ ತಡೆ ನಿಯಮವನ್ನು ಉಲ್ಲಂಘಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Share This Article