ಹೊಸ ಅಬಕಾರಿ ನೀತಿಯಲ್ಲಿ ಅಕ್ರಮ ಆರೋಪ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ವೈಯಕ್ತಿಕವಾಗಿ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ವಾದವನ್ನು ಮಂಡಿಸಿದ್ದರು. ಬಳಿಕ ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ನ್ಯಾಯಾಲಯದ ವಿಚಾರಣೆಯ ವಿಡಿಯೋಗಳನ್ನು ಹರಡುವುದು ನ್ಯಾಯಾಂಗದ ಗೌರವ ಮತ್ತು ಮಾನವನ್ನು ಕುಂಠಿತಗೊಳಿಸುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ


ಆದ್ದರಿಂದ ಇಂತಹ ವಿಷಯಗಳನ್ನು ತಕ್ಷಣ ತೆಗೆದುಹಾಕಬೇಕು ಎಂದು ಆದೇಶಿಸಿದೆ. ನ್ಯಾಯಮೂರ್ತಿ ಸ್ವರ್ಣಾ ಕಾಂತಾ ಶರ್ಮಾ ಅವರು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ವಿಡಿಯೋಗಳನ್ನು ತೆಗೆದುಹಾಕುವಂತೆ ಫೇಸ್ಬುಕ್, ಗೂಗಲ್, ಎಕ್ಸ್ ಸೇರಿದಂತೆ ಸಾಮಾಜಿಕ ಮಾಧ್ಯಮ ಮಧ್ಯಸ್ಥರಿಗೆ ಮತ್ತು ಸರ್ಚ್ ಎಂಜಿನ್ಗಳಿಗೆ ನಿರ್ದೇಶನ ನೀಡಿದ್ದಾರೆ.

ಇನ್ನೂ ಪತ್ರಕರ್ತ ರವೀಶ್ ಕುಮಾರ್ ಸೇರಿದಂತೆ ವಿಡಿಯೋ ಅಪ್ಲೋಡ್ ಮಾಡಿದ ಇತರ ವ್ಯಕ್ತಿಗಳಿಗೂ ನೋಟಿಸ್ ಜಾರಿ ಮಾಡಲಾಗಿದೆ. ವಿಡಿಯೋದಲ್ಲಿ ಕೇಜ್ರಿವಾಲ್ ಅವರು ನ್ಯಾಯಮೂರ್ತಿ ಸ್ವರ್ಣಾ ಕಾಂತಾ ಶರ್ಮಾ ಅವರ ಮುಂದೆ ವೈಯಕ್ತಿಕವಾಗಿ ವಾದಿಸುತ್ತಿದ್ದುದು ಕಂಡುಬಂದಿದೆ. ಈ ಅರ್ಜಿಯಲ್ಲಿ ತಮ್ಮನ್ನು ಪ್ರಕರಣದಿಂದ ಹಿಂತೆಗೆದುಕೊಳ್ಳುವಂತೆ ಕೋರಲಾಗಿತ್ತು.ಇದನ್ನೂ ಓದಿ: ಬೈಕ್ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್


