ಪ್ರೀತಿಯ ವಿದ್ಯಾರ್ಥಿಗಳೆ ನಿಮಗೆ ವಿದಾಯ ಎಂದು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

1 Min Read

ಮಡಿಕೇರಿ: ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಶಿಕ್ಷಕಿಯೊಬ್ಬರು (Teacher) ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿ (Madikeri) ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರೋಹಿಣಿ (51) ಆತ್ಮಹತ್ಯೆಗೆ ಶರಣಾದ ಶಿಕ್ಷಕಿ. ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿದ್ದ ಕೋವಿಯಿಂದ ಗುಂಡು ಹೊಡೆದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸಾಂಬಾರ್ ಮಾಡಿಲ್ಲ ಅಂತ ಅಪ್ಪ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ

ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

Share This Article