ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

0 Min Read

ಯಾದಗಿರಿ: ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿರುವ ಘಟನೆ ಯಾದಗಿರಿ (Yadagiri) ಜಿಲ್ಲೆಯ ಗುರುಮಠಕಲ್ (Gurumatkal) ತಾಲೂಕಿನ ಬುದುರು ಗ್ರಾಮದಲ್ಲಿ ನಡೆದಿದೆ.

ಕುರಿಗಾಹಿಗಳಾದ ಮಲ್ಲಪ್ಪ, ಜಲ್ಲಪ್ಪ ಎಂಬುವವರಿಗೆ ಸೇರಿದ 60 ಕುರಿಗಳು ಮೃತಪಟ್ಟಿವೆ. ಇದನ್ನೂ ಓದಿ: ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಈ ವೇಳೆ ಕುರಿಗಳನ್ನು ಹೊಡೆದುಕೊಂಡು ಬರುವಾಗ ಈ ಅವಘಡ ಸಂಭವಿಸಿದೆ. ಅವಘಡದಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿವೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article