ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ (Family Feud) ಬೇಸತ್ತು ಸಬ್ ಇನ್ಸ್‌ಪೆಕ್ಟರ್ (Sub Inspector) ಪತ್ನಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು (Kadur) ತಾಲೂಕಿನ ಬೀರೂರಲ್ಲಿ ನಡೆದಿದೆ.
ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮ (34) ಮಂಗಳವಾರ ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪೇಶ್ ಹಾಗೂ ಪದ್ಮ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದರು. ಇದನ್ನೂ ಓದಿ: ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು
ಸದ್ಯ ಪದ್ಮ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲೇ ಇದ್ದು, ಪೊಲೀಸರು ಪದ್ಮ ಕುಟುಂಬಸ್ಥರ ಬರುವಿಕೆಗಾಗಿ ಕಾಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡುವ ಸಾಧ್ಯತೆ ಇದೆ. ಇದನ್ನೂ ಓದಿ: ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

