ನವದೆಹಲಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Case) ಜೈಲು ಸೇರಿರುವ ದರ್ಶನ್ (Actor Darshan) ಈಗ ಎರಡನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್ (Supreme Court) ಮೊರೆ ಹೋಗಿದ್ದಾರೆ.
ಹಿರಿಯ ವಕೀಲ ಮುಕುಲ್ ರೋಹ್ಟಗಿ ಕಚೇರಿಯಿಂದ ದರ್ಶನ್ ಪರ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಜೈಲು ಸೇರಿದ 8 ತಿಂಗಳ ಬಳಿಕ ಈ ಅರ್ಜಿ ಸಲ್ಲಿಸಿದ್ದು, ಮೇ 4 ಕ್ಕೆ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ಜಾಮೀನು ಅರ್ಜಿಯಲ್ಲಿ ಪ್ರಕರಣದ ಟ್ರಯಲ್ ಪ್ರಾರಂಭವಾಗಿದೆ. 8 ತಿಂಗಳು ಕಳೆದ್ರೂ ಕೂಡ ಸಾಕ್ಷಿಗಳ ವಿಚಾರಣೆ ಮುಕ್ತಾಯ ಆಗಿಲ್ಲ. ಸಾಕ್ಷಿಗಳ ವಿಚಾರಣೆ ವಿಳಂಬವಾಗುತ್ತಿದೆ. ಟ್ರಯಲ್‌ನಲ್ಲಿ ಸಾಕ್ಷಿಗಳ ವಿಚಾರಣೆ ತಡ ಆದರೆ ಮುಕ್ತಾಯ ಆಗಲು ಸಾಕಷ್ಟು ವರ್ಷ ಬೇಕಾಗಲಿದೆ. ಟ್ರಯಲ್‌ಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತೇನೆ. ಆದ್ದರಿಂದ ಜಾಮೀನು ಮಂಜೂರು ಮಾಡಿ ಎಂದು ಏಪ್ರಿಲ್ 2ನೇ ವಾರದಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
ಟ್ರಯಲ್ ಪ್ರಾರಂಭವಾಗಿ 8 ತಿಂಗಳಿಗೆ 15 ಸಾಕ್ಷಿಗಳಷ್ಟೇ ವಿಚಾರಣೆಯಾಗಿದೆ. ಪ್ರಕರಣದಲ್ಲಿ 273 ಸಾಕ್ಷ್ಯಗಳು ಇದ್ದಾವೆ. ಟ್ರಯಲ್ ಕೋರ್ಟ್‌ನಲ್ಲಿ ರೇಣುಕಾಸ್ವಾಮಿ ತಂದೆ – ತಾಯಿ ಹೊರತು ಪಡಿಸಿದರೆ, ಮಹಜರು ಸಾಕ್ಷಿಗಳ ವಿಚಾರಣೆ ಮಾತ್ರ ನಡೆಯುತ್ತಿದೆ. ಆರೋಪಿಗಳು ಟ್ರಯಲ್ ಸಂದರ್ಭದಲ್ಲಿ ಬೇರೆ ಬೇರೆ ಅರ್ಜಿಗಳ ಸಲ್ಲಿಕೆ ಮಾಡಿದ್ದು, ತುಂಬಾ ವಿಳಂಬಕ್ಕೆ ಕಾರಣವಾಗಿದೆ.
ಟ್ರಯಲ್ ಸಂದರ್ಭದಲ್ಲಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳು
* ಹಾಸಿಗೆ – ದಿಂಬು ನೀಡಬೇಕು
* ಮನೆ ಊಟ ನೀಡಬೇಕು
* ಓಪನ್ ಕೋರ್ಟ್‌ಗೆ ಆರೋಪಿಗಳ ಹಾಜರುಪಡಿಸಿ
* ಕುಟುಂಬವನ್ನು ಪ್ರತ್ಯೇಕ ಕೊಠಡಿಯಲ್ಲಿ ಭೇಟಿ ಮಾಡಲು ಅವಕಾಶಕ್ಕಾಗಿ ಕೋರಿಕೆ
* ತನಿಖಾಧಿಕಾರಿಗಳು ಸುಳ್ಳು ಹೇಳಿದ್ದಾರೆ ಎಂದು ಅರ್ಜಿ
* ಮೊಬೈಲ್ ಸೀಜ್ ಮಾಡುವಾಗ ಕೊಠಡಿಯ ಟೈಲ್ಸ್ ಬದಲಾವಣೆ ಆಗಿದೆ ಎಂದು ಅರ್ಜಿ ಸಲ್ಲಿಕೆಯಾಗಿದೆ. ಹೀಗೆ 8 ತಿಂಗಳಲ್ಲಿ 7ಕ್ಕೂ ಹೆಚ್ಚು ಪ್ರತ್ಯೇಕ ಅರ್ಜಿ ಸಲ್ಲಿಸಲಾಗಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.14 ರಂದು ಜಾಮೀನು ರದ್ದು ಮಾಡಿದ್ದ ಸುಪ್ರೀಂ ಕೋರ್ಟ್, ಆರೋಪಿಗಳಿಗೆ ತಕ್ಷಣವೇ ಶರಣಾಗಲು ಸೂಚಿಸಿತ್ತು. ಆದೇಶದ ಬಳಿಕ ಜೈಲು ಸೇರಿದ್ದ ದರ್ಶನ್, ಇದೀಗ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ದರ್ಶನ್ ಬರ್ತ್‌ಡೇ ಸೆಲೆಬ್ರೇಶನ್‌ಗೆ ಮುಗಿಬಿದ್ದ ಫ್ಯಾನ್ಸ್ – ಹೈಡ್ರಾಮಾ ಮಾಡಿದವನಿಗೆ ಪೊಲೀಸರಿಂದ ಕಪಾಳಮೋಕ್ಷ!

