ಕುರ್ಚಿ ಕದನಕ್ಕೆ ದಲಿತ ಸಿಎಂ ಚೆಕ್‌ಮೇಟ್ ಕೊಟ್ಟ ಯತೀಂದ್ರ

1 Min Read

ರಾಯಚೂರು: ತಮ್ಮ ತಂದೆಯವರನ್ನು (Siddaramaiah) ಹೈಕಮಾಂಡ್ ಸಿಎಂ ಸ್ಥಾನದಿಂದ ಇಳಿಸಿದರೆ ದಲಿತ ಸಿಎಂ ವಿಚಾರ ಮತ್ತೆ ಮುನ್ನೆಲೆಗೆ ಬರುವುದು ಸಹಜ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದರು.

ರಾಯಚೂರಿನಲ್ಲಿ (Raichur) ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್‌ (D.K Shivakumar) ಅವರ ಹುಟ್ಟುಹಬ್ಬಕ್ಕೆ ಹೈಕಮಾಂಡ್‌ನಿಂದ ಗುಡ್ ನ್ಯೂಸ್ ಸಿಗಲಿದೆ ಎಂಬ ವಿಚಾರಕ್ಕೆ ಅವರು ಪ್ರತಿಕ್ರಿಯಿಸಿದರು. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ ಎಂದರು. ಇದನ್ನೂ ಓದಿ: ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

ಮೇ 15 ರೊಳಗೆ ಸಿಎಂ ಬದಲಾವಣೆ ಹಾಗೂ ಸಂಪುಟ ವಿಸ್ತರಣೆ ವಿಚಾರವಾಗಿ ನವೆಂಬರ್‌ನಿಂದಲೂ ಹೇಳುತ್ತಿದ್ದಾರೆ. ನಾನೂ ಅದಕ್ಕೆಲ್ಲ ಉತ್ತರ ಕೊಟ್ಟುಕೊಂಡು ಬರುತ್ತಿದ್ದೇನೆ. ಈ ವಿಚಾರದಲ್ಲಿ ಏನು ಹೇಳಬೇಕೋ ಈಗಾಗಲೇ ಎಲ್ಲಾ ಹೇಳಿ ಆಗಿದೆ. ನಾನು ಈ ವಿಷಯವಾಗಿ ಏನು ಮಾತನಾಡುವುದಿಲ್ಲ. ಏನೇ ಇದ್ದರೂ ಸಿಎಂ ಹಾಗೂ ಹೈಕಮಾಂಡ್‌ನ್ನೇ ಕೇಳಬೇಕು.

ಖರ್ಗೆಯವರನ್ನು ಸಿಎಂ ಮಾಡಿದ್ರೆ ಸ್ವಾಗತ ಮಾಡ್ತಿನಿ ಎಂದ ಪರಮೇಶ್ವರ್ (G.Parameshwar) ಹೇಳಿಕೆ ವಿಚಾರಕ್ಕೆ, ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಬದ್ಧ. ಇನ್ನೂ, ಸಚಿವ ಮಹದೇವಪ್ಪ ಮನೆಯಲ್ಲಿ ಡಿನ್ನರ್ ಮೀಟಿಂಗ್ ಬಗ್ಗೆ ನನಗೆ ಮಾಹಿತಿ ಇಲ್ಲ. ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದು ಸಹಜ. ಎರಡು ವರ್ಷ ಆದ್ಮೇಲೆ ಸಂಪುಟ ಪುನರ್ ರಚನೆಯಲ್ಲಿ ನಮಗೂ ಸ್ಥಾನ ಸಿಗುತ್ತೆ ಅಂತ ಕೇಳ್ತಾರೆ.‌ ಈ ವಿಚಾರವಾಗಿ ಶಾಸಕರು ದೆಹಲಿಗೆ ಹೋದ್ರೆ ತಪ್ಪಿಲ್ಲ ಎಂದಿದ್ದಾರೆ. ಇದನ್ನೂ ಓದಿ: ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Share This Article