ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1 Min Read

ಹಾಸನ: ಸ್ವಿಫ್ಟ್ ಕಾರೊಂದು (Car) ನಾಲೆಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ತಾಯಿ, ಮಗ ಸ್ಥಳದಲ್ಲೇ ಸಾವನ್ನಪ್ಪಿ, ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಚನ್ನರಾಯಪಟ್ಟಣ (Channarayapatna) ತಾಲ್ಲೂಕಿನ ಮಲ್ಲನಘಟ್ಟ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಪ್ರಿಯಾಂಕ (30), ವೈಭವ್ (ಒಂದೂವರೆ ವರ್ಷ) ಎಂದು ಗುರುತಿಸಲಾಗಿದೆ. ಬೆಂಗಳೂರಿನ ದೇವನಹಳ್ಳಿಯ ನಿವಾಸಿಗಳಾದ ಮಂಜುನಾಥ್, ಪತ್ನಿ ಪ್ರಿಯಾಂಕ, ಪುತ್ರ ವೈಭವ್, ಸಂಬಂಧಿಗಳಾದ ಚಂದನ್, ದಿಲೀಪ್, ದೇವರಾಜು KA-02-MT-2690 ನಂಬರ್‌ನ ಸ್ವಿಫ್ಟ್ ಕಾರಿನಲ್ಲಿ ಧರ್ಮಸ್ಥಳಕ್ಕೆ ಹೋಗಿ ವಾಪಾಸ್ ಆಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಕಾರು ಬಿದ್ದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರನ್ನು ನಾಲೆಯಿಂದ ಮೇಲೆತ್ತಲಾಗಿದೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕೌಟುಂಬಿಕ ಕಲಹ – ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು

Share This Article