ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

1 Min Read

– ಗಾಯಗೊಂಡವರಿಗೆ ತಲಾ 50 ಸಾವಿರ ರೂ.

ಬೆಂಗಳೂರು: ಶಿವಾಜಿನಗರದಲ್ಲಿ ಇಂದು ಸಂಜೆ ಸುರಿದ ಭಾರಿ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿರುವ ದುರಂತ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. 7 ಜನರ ಸಾವಿಗೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ.

ಕರ್ನಾಟಕದ ಬೆಂಗಳೂರಿನಲ್ಲಿ ಗೋಡೆ ಕುಸಿದು ಸಂಭವಿಸಿದ ದುರ್ಘಟನೆ ದುರದೃಷ್ಟಕರ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಧಾನಿ ಮೋದಿ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಮೃತರ ಕುಟುಂಬಸ್ಥರಿಗೆ PMNRF ನಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಪ್ರಧಾನಿಗಳು ತಿಳಿಸಿದ್ದಾರೆ.

Share This Article