ಕಾಂಪೌಂಡ್ ಕುಸಿದು 7 ಜನರ ಸಾವಿನಿಂದ ಆಘಾತ: ಡಿಕೆಶಿ

4 Min Read

– ದುರ್ಬಲ ಮರಗಳ ಕೊಂಬೆ ತೆರವಿಗೆ ನಿರ್ದೇಶನ
– ಬಿಜೆಪಿಗರು ಟೀಕೆ ಬಿಟ್ಟು ಏನೂ ಸಹಾಯ ಮಾಡಲ್ಲ

ಬೆಂಗಳೂರು: ಕಾಂಪೌಂಡ್ ಕುಸಿದು (Compound Collapse) ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಬೇಸರ ವ್ಯಕ್ತಪಡಿಸಿದರು.

ಕಾಪೌಂಡ್ ಗೋಡೆ ಕುಸಿದು ಏಳು ಮಂದಿ ಮೃತಪಟ್ಟ ಹಾಗೂ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಬೌರಿಂಗ್ ಆಸ್ಪತ್ರೆಗೆ (Bowring Hospital) ಡಿಸಿಎಂ ಡಿಕೆ ಶಿವಕುಮಾರ್ ಅವರು ಬುಧವಾರ ರಾತ್ರಿ ಭೇಟಿ ನೀಡಿ ಮಾಹಿತಿ ಪಡೆದರು. ಇದನ್ನೂ ಓದಿ: 25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

ನಂತರ ಮಾಧ್ಯಮಗಳೊಂದಿಗೆ ಮಾತನಾಟಡಿದ ಅವರು, ಏಳು ಜನ ಮೃತಪಟ್ಟಿದ್ದು, ಅದರಲ್ಲಿ 4 ಜನ ಬೀದಿ ಬದಿ ವ್ಯಾಪಾರಿಗಳು, ಇಬ್ಬರು ಕೇರಳದವರು. ಒಂದು ಮಗು ಸಾವನ್ನಪ್ಪಿದ್ದು, ಒಬ್ಬರ ಗುರುತು ಇನ್ನೂ ಸಿಕ್ಕಿಲ್ಲ. ಚಪ್ಪಲಿ ವ್ಯಾಪಾರಿ, ಬಟ್ಟೆ ವ್ಯಾಪಾರಿ ಮೃತಪಟ್ಟಿದ್ದಾರೆ. ಪ್ರವಾಸಕ್ಕೆ ಕೇರಳದಿಂದ ಬಂದವರು ಮೃತಪಟ್ಟಿದ್ದಾರೆ ಎಂದರು. ಇದನ್ನೂ ಓದಿ: ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

ಮರಗಳು, ಕೊಂಬೆಗಳು ಬಿದ್ದು ವಾಹನಗಳಿಗೂ ಹಾನಿಯಾಗಿದೆ. ನಾಳೆಯಿಂದಲೇ ದುರ್ಬಲ ಕೊಂಬೆಗಳನ್ನು ತೆರವುಗೊಳಿಸಲು ನಾನು ನಿರ್ದೇಶನ ನೀಡಿರುವೆ. ನಗರದಲ್ಲಿ ನೂರಕ್ಕೂ ಹೆಚ್ಚು ಕಡೆ ಮರ ಬಿದ್ದಿದ್ದು, ಅಪಾಯಕಾರಿಯಾಗಿರುವ ಮರ ಹಾಗೂ ಕೊಂಬೆಗಳನ್ನು ಗುರುತಿಸಿ, ತೆರವುಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಾನು ಕನಕಪುರದಿಂದ ಮರಳುವಾಗಲೂ ಅನೇಕ ಕಡೆಗಳಲ್ಲಿ ಮರ ಬಿದ್ದಿರುವುದನ್ನು ಗಮನಿಸಿದೆ ಎಂದು ಹೇಳಿದರು. ಇದನ್ನೂ ಓದಿ: Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

ಮುಖ್ಯಮಂತ್ರಿಗಳು ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ಇಲ್ಲಿ ಪರಿಹಾರಕ್ಕಿಂತ ಈ ಅಪಘಾತ ಸಂಭವಿಸಬಾರದಿತ್ತು. ಕೇರಳದ ಕುಟುಂಬಶ್ರೀ ಎನ್ನುವ ಸಂಸ್ಥೆಯ ಮುಖಾಂತರ 56 ಮಂದಿ ಪ್ರವಾಸಕ್ಕೆ ಬಂದಿದ್ದಾರೆ. ಕಮರ್ಷಿಯಲ್ ಸ್ಟ್ರೀಟ್ ಅಲ್ಲಿ ಶಾಪಿಂಗ್‌ಗೆ ಬಂದಿದ್ದರು. ಆಗ ಮಳೆ ಬಂದಿದೆ. ಎಲ್ಲರಿಗೂ ಎಚ್ಚರಿಕೆ ನೀಡಿದ್ದಾರೆ. ಆಗ ಅವರು ಮಳೆಯಿಂದ ರಕ್ಷಣೆ ಪಡೆಯಲು ಗೋಡೆ ಪಕ್ಕ ಹೋಗಿದ್ದಾರೆ. ಆಗ 8 ಅಡಿ ಎತ್ತರದ ಗೋಡೆ ಕುಸಿದು ಮೃತಪಟ್ಟಿದ್ದಾರೆ. ಪ್ರೀತಿ, ಶೈಜಾ, ಶಿಜು ಎನ್ನುವ ಮೂವರು ಗಾಯಗೊಂಡಿದ್ದರು. ಈಗ ಚೇತರಿಸಿಕೊಂಡಿದ್ದಾರೆ ಎಂದರು. ಇದನ್ನೂ ಓದಿ: ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವು – ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಲತಾ ಮತ್ತು ಸ್ಪೃತಿ ಮೃತಪಟ್ಟಿದ್ದಾರೆ. ಇವರೆಲ್ಲಾ ನ್ಯೂಟ್ರಿಷಿಯನ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದವರು. ಸರ್ಕಾರದ ಅಧಿಕಾರಿಗಳು ಸಹ ಇವರ ಜೊತೆ ಬಂದಿದ್ದಾರೆ. ಕೇರಳ ಸರ್ಕಾರಕ್ಕೂ ನಾವು ಮಾಹಿತಿ ನೀಡುತ್ತೇವೆ. ಶವ ಪರೀಕ್ಷೆ ನಡೆಸಿ ಇಲ್ಲಿಂದಲೇ ಗೌರವಯುತವಾಗಿ ಅವರನ್ನು ಕಳಿಸಿಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

ಬಿಜೆಪಿಗರು ಏನೂ ಸಹಾಯ ಮಾಡಲ್ಲ:
ಸರ್ಕಾರದ ವೈಫಲ್ಯ ಎನ್ನುವ ಬಿಜೆಪಿಯವರ ಟೀಕೆ ಬಗ್ಗೆ ಪ್ರತಿಕ್ರಿಯಿಸಿ, ವಿರೋಧ ಪಕ್ಷದವರು ಹೇಳಿದ್ದನ್ನೇ ಹೇಳುತ್ತಾರೆ. ಅವರಿಗೆ ಇನ್ನೇನು ಹೇಳುವುದು. ಅವರುಗಳು ಏನೂ ಸಹಾಯ ಮಾಡುವುದಿಲ್ಲ. ಟೀಕೆ ಮಾಡಬೇಕು, ದೂರಬೇಕು. ಮಾಧ್ಯಮಗಳ ಮುಂದೆ ಏನೋ ಒಂದು ಮಾತನಾಡಬೇಕು. ನಾವು ಏನಾದರೂ ಪರಿಹಾರ ಕಂಡು ಹಿಡಿಯಬೇಕು ಎಂದು ನಾವು ಆಲೋಚಿಸುತ್ತಿದ್ದೇವೆ ಎಂದರು. ಇದನ್ನೂ ಓದಿ: ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

ನಾನು ಕನಕಪುರದಲ್ಲಿ ಕೆಡಿಪಿ ಸಭೆ ಮಾಡುತ್ತಿದ್ದಾಗ, ಈ ದುರ್ಘಟನೆ ಬಗ್ಗೆ ಪೊಲೀಸ್ ಆಯುಕ್ತರು ಜಿಬಿಎ ಆಯುಕ್ತರು ನನಗೆ ಕರೆ ಮಾಡಿ ತಿಳಿಸಿದರು. ಈ ಸ್ಥಳಕ್ಕೆ ಸಿಎಂ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇದು ಅತ್ಯಂತ ಹಳೆಯ ಗೋಡೆಯಾಗಿದ್ದು, ಈ ಘಟನೆ ನಡೆದಿರುವುದು ದುರ್ದೈವ. ಈ ದುರಂತ ಬಹಳ ನೋವು ತಂದಿದೆ. ಈ ಬಗ್ಗೆ ತನಿಖೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ವರದಿಗಳ ಪ್ರಕಾರ ಬೆಂಗಳೂರು ಮಳೆಗೆ 8 ಸಾವು ಸಂಭವಿಸಿದೆ. ವೆಗಾ ಸಿಟಿ ಮಾಲ್ ಬಳಿ ಒಂದು ಸಾವು ಸಂಭವಿಸಿದೆ ಎಂದು ನುಡಿದರು. ಇದನ್ನೂ ಓದಿ: ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

ಇಂತಹ ಅಪಾಯಕಾರಿ ಜಾಗಗಳಲ್ಲಿ ಬೀದಿ ವ್ಯಾಪಾರಿಗಳು ವ್ಯಾಪಾರ ಮಾಡದಂತೆ ಕ್ರಮ ವಹಿಸಲು ಜಿಬಿಎ ಆಯುಕ್ತರಿಗೆ ಸೂಚಿಸಿರುವೆ. ಈ ಬಾರಿ ಮಳೆ ಬರುವುದಿಲ್ಲ ಎಂಬ ಆತಂಕ ಇತ್ತು, ಮಳೆ ಬರಬೇಕು. ಬೆಂಗಳೂರಿನಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಆಲಿಕಲ್ಲು ಮಳೆ ಬಿದ್ದಿರಲಿಲ್ಲ. ಮುಂದೆ ಇಂತಹ ಅನಾಹುತ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು. ಇದನ್ನೂ ಓದಿ: ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

ಇದು ಜಿಬಿಎ ಅಧಿಕಾರಿಗಳ ವೈಫಲ್ಯವಲ್ಲವೇ ಎಂದು ಕೇಳಿದಾಗ, ಇದು ನೂರು ವರ್ಷಗಳ ಹಳೆಯ ಆಸ್ಪತ್ರೆ. ಹೊಸ ಆಸ್ಪತ್ರೆಯಲ್ಲ. ಈ ಭಾಗವನ್ನು ಸರಿಯಾದ ರೀತಿ ನಿರ್ವಹಣೆ ಮಾಡಿಲ್ಲ. ಹೀಗಾಗಿ ಈ ದುರ್ಘಟನೆ ಸಂಭವಿಸಿದೆ. ಇದು ಜಿಬಿಎಗೆ ಸಂಬಂಧಿಸಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

ಆರೋಪ ಮಾಡುವ ಸಮಯವಲ್ಲ:
ಇಂತಹ ಪರಿಸ್ಥಿತಿಯಲ್ಲಿ ಯಾರಾದರೂ ಹೊಣೆಗಾರಿಕೆ ಹೊತ್ತುಕೊಳ್ಳಬೇಕು. ಈಗ ಆರೋಪ ಮಾಡುವ ಸಮಯವಲ್ಲ. ಪರಿಹಾರ ಕಂಡುಕೊಳ್ಳುವುದು ಮುಖ್ಯ ಎಂದು ತಿಳಿಸಿದರು. ಇದನ್ನೂ ಓದಿ: ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Share This Article