ಬೆಂಗಳೂರು: ಚಿನ್ನ (Gold) ಮತ್ತು ಬೆಳ್ಳಿಯ(Silver) ದರ ಏರಿಕೆಯಾಗುತ್ತಿದ್ದಂತೆ ಕಳ್ಳರು ಮತ್ತೆ ತಮ್ಮ ಕೈಚಳಕ ತೋರಿಸಲು ಶುರುಮಾಡಿದ್ದಾರೆ. ಬೆಂಗಳೂರಿನ (Bengaluru) ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನಲ್ಲಿರುವ ಎಂಬಿ ಜ್ಯುವೆಲ್ಲರ್ಸ್ (MB Jewellers) ಮಳಿಗೆಯಲ್ಲಿ ಭೀಕರ ಕಳ್ಳತನ ನಡೆದಿದ್ದು, ಸುಮಾರು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳನ್ನು ಕದೀಮರು ದೋಚಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಅತ್ಯಂತ ಯೋಜಿತವಾಗಿ ಕಳ್ಳತನ ಮಾಡಲಾಗಿದೆ. ಜ್ಯುವೆಲ್ಲರಿ ಶಾಪ್ನ ಹಿಂಭಾಗದ ರೂಮ್ನ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ನಂತರ ಗೋಡೆಯನ್ನು ಕೊರೆದು ಮಳಿಗೆಯೊಳಗೆ ಪ್ರವೇಶಿಸಿ ಸುಮಾರು 70 ಕೆಜಿ ಬೆಳ್ಳಿ ವಸ್ತುಗಳ್ಳನ್ನು ಕದ್ದಿದ್ದಾರೆ. ಇದನ್ನೂ ಓದಿ: ಬಿಡದಿ ಟೌನ್ಶಿಪ್ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ
ನಗರದಲ್ಲಿ ಸರಣಿ ಕಳ್ಳತನಗಳು ನಡೆಯುತ್ತಿರುವುದು ವ್ಯಾಪಾರಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

