ಪೀಣ್ಯ ಫ್ಲೈಓವರ್‌ನಲ್ಲಿ 4 ದಿನ ವಾಹನ ಸಂಚಾರಕ್ಕೆ ನಿರ್ಬಂಧ

1 Min Read

ಬೆಂಗಳೂರು: ಪೀಣ್ಯ ಎಲಿವೇಟೆಡ್ ಫ್ಲೈಓವರ್‌ನಲ್ಲಿ (Peenya Flyover) 4 ದಿನಗಳ ಕಾಲ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ-4ರಲ್ಲಿರುವ ಪೀಣ್ಯ ಮೇಲ್ಸೇತುವೆಯಲ್ಲಿ ‘ಲೋಡ್ ಟೆಸ್ಟಿಂಗ್’ (ಭಾರ ಪರೀಕ್ಷೆ) ಮತ್ತು ಸುರಕ್ಷತಾ ಪರಿಶೀಲನೆ ನಡೆಯಲಿದೆ. ಹೀಗಾಗಿ, ಮೇ 5ರ ಮುಂಜಾನೆ 5 ಗಂಟೆಯಿAದ ಮೇ 8 ರ ಬೆಳಗ್ಗೆ 11 ಗಂಟೆಯ ತನಕ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಎಸ್.ಎಂ.ಕೃಷ್ಣ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿ: ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೂಚನೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕೋರಿಕೆಯಂತೆ 4 ದಿನ ಪೀಣ್ಯ ಮೇಲ್ಸೇತುವೆಯ ಕೆನ್ನಮೆಟಲ್ ವಿಡಿಯಾ ಅಪ್ ರ‍್ಯಾಂಪ್‌ನಿಂದ ಎಸ್‌ಆರ್‌ಎಸ್ ಡೌನ್ ರ‍್ಯಾಂಪ್‌ವರೆಗೆ ಎರಡೂ ಬದಿಯಲ್ಲಿ ಎಲ್ಲಾ ಮಾದರಿಯ ವಾಹನಗಳಿಗೆ ತಾತ್ಕಾಲಿಕವಾಗಿ ನಿರ್ಬಂಧ ಹೇರಲಾಗಿದೆ.

ಪರ್ಯಾಯ ಮಾರ್ಗ
ನೆಲಮಂಗಲ-ಬೆಂಗಳೂರು ಕಡೆಗೆ: ಕೆನ್ನಮೆಟಲ್ ಫ್ಯಾಕ್ಟರಿ ಹತ್ತಿರ ಮೇಲ್ಸೇತುವೆ ಕೆಳಭಾಗದ ಎನ್.ಹೆಚ್-4 ಮತ್ತು ಸರ್ವಿಸ್ ರಸ್ತೆ ಮೂಲಕ 8ನೇ ಮೈಲಿ ದಾಸರಹಳ್ಳಿ ಜಾಲಹಳ್ಳಿ ಕ್ರಾಸ್ ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ ಎಸ್‌ಆರ್‌ಎಸ್ ಜಂಕ್ಷನ್ ಗೊರಗುಂಟೆಪಾಳ್ಯ ಮೂಲಕ ಸಂಚರಿಸಬಹುದು. ಇದನ್ನೂ ಓದಿ: ಗ್ಯಾಸ್ ಬೆಲೆ ಏರಿಕೆ ಮಾಡಿ, ಸೌದೆ ಭಾಗ್ಯ ಕೊಡುತ್ತಿದ್ದಾರೆ: ಡಿಕೆಶಿ

ಸಿಎಂಟಿಐ-ನೆಲಮಂಗಲ ಕಡೆಗೆ: ಮೇಲ್ಸೇತುವೆ ಕೆಳಭಾಗದ ಎನ್.ಹೆಚ್-4 ಮತ್ತು ಸರ್ವಿಸ್ ರಸ್ತೆ ಮೂಲಕ ಎಸ್‌ಆರ್‌ಎಸ್ ಜಂಕ್ಷನ್ ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ ಜಾಲಹಳ್ಳಿ ಕ್ರಾಸ್ ದಾಸರಹಳ್ಳಿ 8ನೇ ಮೈಲಿ ಪಾರ್ಲೆ ಜಿ ಟೋಲ್ ಮೂಲಕ ಸಂಚರಿಸಬಹುದು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

Share This Article