IPL 2026 | ವೈಭವ್‌ ಅಬ್ಬರಕ್ಕೆ ಹೆದರಿದ್ದೆ – ಕೈಲ್ ಜೇಮಿಸನ್

1 Min Read

ಪಿಎಲ್ 2026ರಲ್ಲಿ (IPL 2026) ರಾಜಸ್ಥಾನ್ ರಾಯಲ್ಸ್ (RR) ಪರ ಆಡುತ್ತಿರುವ ವೈಭವ್ ಸೂರ್ಯವಂಶಿ (Vaibhav Suryavanshi) ಆಕ್ರಮಣಕಾರಿ ಆಟ ಮುಂದುವರೆಸಿದ್ದಾರೆ. ಭುವನೇಶ್ವರ್ ಕುಮಾರ್, ಜಸ್ಪ್ರಿತ್ ಬುಮ್ರಾ, ಜೋಶ್ ಹ್ಯಾಜಲ್‌ವುಡ್‌, ಪ್ಯಾಟ್‌ ಕಮಿನ್ಸ್‌ನಂತಹ ಅನುಭವಿ ಬೌಲರ್‌ಗಳ ವಿರುದ್ಧವೇ ಅವರು ಸಿಕ್ಸರ್‌ಗಳ ಸುರಿಮಳೆ ಸುರಿಸಿ ಅಭಿಮಾನಿಗಳ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ.

ಇತ್ತೀಚೆಗೆ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೈಲ್ ಜೇಮಿಸನ್ (Kyle Jamieson), ವೈಭವ್ ವಿಕೆಟ್‌ ಉರುಳಿಸಿ ಸಂಭ್ರಮಿಸಿದ್ದರು. IPL ವೆಬ್‌ಸೈಟ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಈ ಬಗ್ಗೆ ಅವರು ಸ್ಪಷ್ಟನೆಯನ್ನೂ ನೀಡಿದ್ದು, ನಾನು ನನ್ನ ಜೀವನದಲ್ಲಿ 15 ವರ್ಷದ ಹುಡುಗನಿಗೆ ಈ ಮಟ್ಟಕ್ಕೆ ಹೆದರಿರಲಿಲ್ಲ. ರಾಜಸ್ಥಾನ್ ರಾಯಲ್ಸ್ ತಂಡದ ಈ ಯುವ ಆಟಗಾರ ಅಂತಹ ಅದ್ಭುತ ಬ್ಯಾಟಿಂಗ್ ಸಾಮರ್ಥ್ಯ ಹೊಂದಿದ್ದಾನೆ ಎಂದು ವೈಭವ್ ಸೂರ್ಯವಂಶಿ ಜೊತೆಗಿನ ಆಟದ ಅನುಭವವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಚೆನ್ನೈಗೆ 8 ವಿಕೆಟ್‌ಗಳ ಭರ್ಜರಿ ಜಯ – ಮುಂಬೈಗೆ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

ಇತ್ತೀಚೆಗೆ ರಾಜಸ್ಥಾನ್ ರಾಯಲ್ಸ್‌ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯದ ಹಾದಿಗೆ ಮರಳಲು ಪ್ರಯತ್ನಿಸುತ್ತಿತ್ತು. ಈ ವೇಳೆ ತಂಡಕ್ಕೆ ದೊಡ್ಡ ಸವಾಲಾಗಿ ನಿಂತಿದ್ದು ವೈಭವ್ ಸೂರ್ಯವಂಶಿ. ಕಿವೀಸ್ ವೇಗಿ ಕೈಲ್ ಜೇಮಿಸನ್ ಆರಂಭದಲ್ಲೇ ವೈಭವ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ವಿಕೆಟ್ ಪಡೆದ ಬಳಿಕ ಅತಿಯಾಗಿ ಸಂಭ್ರಮಿಸಿದ್ದರು. ಇದನ್ನೂ ಓದಿ: ಮುಂಬೈ ವಿರುದ್ಧ ಗೆದ್ದು ಐಪಿಎಲ್‌ನಲ್ಲಿ ಇತಿಹಾಸ ಬರೆದ ಸಿಎಸ್‌ಕೆ

Share This Article