3-4 ತಿಂಗಳಿನಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ

Public TV
0 Min Read

ಕೋಲಾರ: ತಾಲೂಕಿನ ಅರಾಭಿಕೊತ್ತನೂರು ಗ್ರಾಮದ ಬೆಟ್ಟದ ತಪ್ಪಲಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ.

ಕಳೆದ ಮೂರ್ನಾಲ್ಕು ತಿಂಗಳಿಂದ ಗ್ರಾಮದ ಸುತ್ತಮುತ್ತಲಿನ ಜನರ ನಿದ್ದೆಗೆಡಿಸಿದ್ದ ಈ ಚಿರತೆ ಇದೀಗ ಬೋನಿಗೆ ಬಿದ್ದಿದೆ. ಸದ್ಯ ಚಿರತೆಯನ್ನ ನೋಡಲೆಂದು ಕುತೂಹಲದಿಂದ ಜನ ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ, ಚಿರತೆಯನ್ನ ಸಾಗಿಸಲು ಚಿಂತನೆ ನಡೆಸಿದ್ದಾರೆ. ಈ ಘಟನೆ ಕೋಲಾರ ಗ್ರಾಮಾಂತರ ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 

Share This Article
Leave a Comment

Leave a Reply

Your email address will not be published. Required fields are marked *