ಕ್ಲೀನ್ ಸ್ವೀಪ್‍ನೊಂದಿಗೆ ಸರಣಿ ಗೆದ್ದು ಇತಿಹಾಸ ಸೃಷ್ಟಿಸಿದ ಕೊಹ್ಲಿ ಪಡೆ

Public TV
1 Min Read

ಪಲ್ಲಕೆಲೆ: ಮೂರನೇ ಟೆಸ್ಟ್ ಪಂದ್ಯವನ್ನು ಒಂದು ಇನ್ನಿಂಗ್ಸ್ 171 ರನ್‍ಗಳಿಂದ ಗೆಲ್ಲುವ ಮೂಲಕ ಭಾರತ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಮೂಲಕ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ವಿದೇಶದ ನೆಲದಲ್ಲಿ  ಎಲ್ಲ ಟೆಸ್ಟ್ ಪಂದ್ಯಗಳನ್ನು ಗೆದ್ದ  ಹೆಗ್ಗಳಿಕೆಗೆ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಪಾತ್ರವಾಗಿದೆ.

ಎರಡನೇ ದಿನದ ಆಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 19 ರನ್ ಗಳಿಸಿದ್ದ ಲಂಕಾ ಇಂದು 74.1 ಓವರ್ ಗಳಲ್ಲಿ 181 ರನ್ ಗಳಿಗೆ ಆಲೌಟ್ ಆಯ್ತು.

ಸ್ಪಿನ್ನರ್ ಆರ್ ಅಶ್ವಿನ್ 4 ವಿಕೆಟ್ ಕಿತ್ತರೆ, ಮೊಹಮ್ಮದ್ ಶಮಿ 3 ವಿಕೆಟ್ ಕಬಳಿಸಿದರು. ಉಮೇಶ್ ಯಾದವ್ 2 ವಿಕೆಟ್ ಪಡೆದರೆ, ಕಲದೀಪ್ ಯಾದವ್ 1 ವಿಕೆಟ್ ಪಡೆದರು.

ಲಂಕಾ ಪರವಾಗಿ ನಾಯಕ ಚಂಡಿಮಲ್ 36 ರನ್, ಏಂಜಲೋ ಮ್ಯಾಥ್ಯೂಸ್ 35 ರನ್, ಡಿಕ್‍ವೆಲ್ಲ 41 ರನ್ ಗಳಿಸಿದರು.

ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 487 ರನ್ ಗಳಿಗೆ ಆಲೌಟ್ ಆಗಿದ್ದರೆ, ಶ್ರೀಲಂಕಾ 135 ರನ್ ಗಳಿಸಿ ಫಾಲೋ ಆನ್‍ಗೆ ತುತ್ತಾಗಿತ್ತು. ಮೊದಲ ಟೆಸ್ಟ್ ಪಂದ್ಯವನ್ನ ಭಾರತ 304 ರನ್ ಗಳಿಂದ ಗೆದ್ದಿದ್ದರೆ, ಎರಡನೇ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್ ಮತ್ತು 53 ರನ್ ಗಳಿಂದ ಗೆದ್ದುಕೊಂಡಿತ್ತು.

 

 

Share This Article
Leave a Comment

Leave a Reply

Your email address will not be published. Required fields are marked *