ಬಿಜೆಪಿಯಲ್ಲಿ ಸಿಎಂ ಅಭ್ಯರ್ಥಿಯೇ ಜೈಲಿಗೆ ಹೋಗಿ ಬಂದವರು- ಖೇಣಿ ಕಾಂಗ್ರೆಸ್ ಸೇರ್ಪಡೆಗೆ ಸಿಎಂ ಸಮರ್ಥನೆ

Public TV
1 Min Read

ಬೆಂಗಳೂರು: ಶಾಸಕ ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆಯನ್ನ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಖೇಣಿ ಯಡಿಯೂರಪ್ಪ ಅವರಂತೆ ಜೈಲಿಗೆ ಹೋಗಿದ್ರಾ? ಶಾಸಕ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಒಂದೇನಾ? ಬಿಜೆಪಿಯಲ್ಲಿ ಸಿಎಂ ಅಭ್ಯರ್ಥಿಯೇ ಜೈಲಿಗೆ ಹೋಗಿ ಬಂದವರು. ಜನಾರ್ದನ ರೆಡ್ಡಿ ಗಿಂತಲೂ ದೊಡ್ಡ ಭ್ರಷ್ಟ ಇರಲು ಸಾಧ್ಯವೇ? ಎಂದು ಹೇಳುವ ಮೂಲಕ ಪರೋಕ್ಷವಾಗಿ ಖೇಣಿ ಪಕ್ಷ ಸೇರ್ಪಡೆಯನ್ನ ಸಮರ್ಥಿಸಿಕೊಂಡರು.

ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಚರ್ಚೆ ನಡಸಲು ಬಂದಿದ್ದೇನೆ. ರಾಹುಲ್ ಗಾಂಧಿ ಭೇಟಿಯಾಗಿ ಮಾತುಕತೆ ನಡೆಸಲಿದ್ದೇವೆ ಎಂದು ಸಿಎಂ ಹೇಳಿದ್ರು. ಗೌರಿ ಲಂಕೇಶ್ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಎಸ್‍ಐಟಿ ತನಿಖೆ ಪ್ರಗತಿಯಲ್ಲಿದೆ. ಸದ್ಯ ಏನೂ ಕಮೆಂಟ್ ಮಾಡುವುದಿಲ್ಲ ಎಂದರು.

Share This Article
Leave a Comment

Leave a Reply

Your email address will not be published. Required fields are marked *