ಯುವರಾಜ್ ದಾಖಲೆ ಮುರಿದ ರೋ`ಹಿಟ್’

Public TV
1 Min Read

ಕೊಲಂಬೊ: ಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಟಿ20 ಮಾದರಿಯಲ್ಲಿ ಭಾರತದ ಪರ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಯುವರಾಜ್ ಸಿಂಗ್ ದಾಖಲೆಯನ್ನು ಮುರಿದಿದ್ದಾರೆ.

ಶ್ರೀಲಂಕಾದಲ್ಲಿ ನಡೆಯುತ್ತಿರುವ ನಿದಾಸ್ ತ್ರಿಕೋನ ಟಿ20 ಸರಣಿಯ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 5 ಸಿಕ್ಸರ್ ಸಿಡಿಸುವ ಮೂಲಕ ವೃತ್ತಿ ಜೀವನದಲ್ಲಿ 75 ಸಿಕ್ಸರ್ ಗಳಿಸಿ ದಾಖಲೆ ಬರೆದಿದ್ದಾರೆ. ಈ ಹಿಂದೆ ಯುವರಾಜ್ ಸಿಂಗ್ 74 ಸಿಕ್ಸರ್ ಸಿಡಿಸಿದ್ದರು. ಸರಣಿಯ ಆರಂಭಿಕ ಪಂದ್ಯಗಳಲ್ಲಿ ಕಳಪೆ ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದ ರೋಹಿತ್ ಈ ಪಂದ್ಯದಲ್ಲಿ ಕೇವಲ 61 ಎಸೆತಗಳಲ್ಲಿ 5 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 89 ರನ್ ಗಳಿಸಿದರು.

ಟಿ20 ಮಾದರಿಯಲ್ಲಿ ವೆಸ್ಟ್ ಇಂಡಿಸ್ ನ ಸ್ಫೋಟಕ ಆಟಗಾರರ ಕ್ರಿಸ್ ಗೇಲ್ ಹಾಗೂ ನ್ಯೂಜಿಲೆಂಡ್ ನ ಮಾರ್ಟಿನ್ ಗುಪ್ಟಿಲ್ 103 ಸಿಕ್ಸರ್ ಸಿಡಿಸಿ ಜಂಟಿಯಾಗಿ ಮೊದಲ ಸ್ಥಾನ ಪಡೆದಿದ್ದಾರೆ. ನಂತರದಲ್ಲಿ ನ್ಯೂಜಿಲೆಂಡ್ ನ ಬ್ರೆಂಡನ್ ಮೆಕ್ಲಮ್ (91), ಆಸ್ಟ್ರೇಲಿಯಾದ ಶೇನ್ ವ್ಯಾಟ್ಸನ್ (83) ಸಿಕ್ಸರ್ ಮೂಲಕ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದಿದ್ದಾರೆ. ನ್ಯೂಜಿಲೆಂಡ್ ನ ಕಾಲಿನ್ ಮನ್ರೋ 78 ಸಿಕ್ಸ್, ಇಂಗ್ಲೆಂಡಿನ ಇಯಾನ್ ಮಾರ್ಗನ್ 76 ಸಿಕ್ಸ್ ಸಿಡಿಸಿದ್ದಾರೆ.

ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ 8ನೇ ಸ್ಥಾನ ಪಡೆದಿದ್ದಾರೆ. ಬಾಂಗ್ಲಾ ವಿರುದ್ಧ ಪಂದ್ಯದಲ್ಲಿ ಕೇವಲ 42 ಎಸೆತಗಳಲ್ಲಿ ತಮ್ಮ 13  ನೇ ಅರ್ಧ ಶತಕ ಸಿಡಿಸಿದರು.

ಪಂದ್ಯದ ನಂತರ ಮಾತನಾಡಿದ ರೋಹಿತ್, ಸುರೇಶ್ ರೈನಾ (47) ಹಾಗೂ ವಾಷಿಂಗ್ಟಂನ್ ಸುಂದರ್ (3/22) ಅವರ ಪ್ರದರ್ಶನವನ್ನು ಪ್ರಶಂಸಿದರು. ಸರಣಿಯ ಪೈನಲ್ ಪಂದ್ಯದಲ್ಲಿ ಗೆಲ್ಲುವ ವಿಶ್ವ ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *