ದ್ರಾವಿಡ್, ಕುಂಬ್ಳೆಗೆ ಟಿಕೆಟ್ ಆಫರ್ ನೀಡಿದ ಬಿಜೆಪಿ

Public TV
1 Min Read

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದಿಂದ ಸ್ಪರ್ಧಿಸುವಂತೆ ಬಿಜೆಪಿ ಪಕ್ಷ ರಾಹುಲ್ ದ್ರಾವಿಡ್ ಹಾಗೂ ಅನಿಲ್ ಕುಂಬ್ಳೆ ಅವರಿಗೆ ಟಿಕೆಟ್ ಆಫರ್ ನೀಡಿದ್ದು, ಆದರೆ ಇದನ್ನು ಇಬ್ಬರು ಆಟಗಾರರು ನಿರಾಕರಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಮೂಲಗಳ ಪ್ರಕಾರ ಬಿಜೆಪಿ ಇಬ್ಬರು ಆಟಗಾರರನ್ನು ತಮ್ಮ ಪಕ್ಷದತ್ತ ಸೆಳೆಯಲು ಕಳೆದ ಕೆಲ ವಾರಗಳಿಂದ ಪ್ರಯತ್ನಿಸುತ್ತಿದ್ದು, ಸ್ಟಾರ್ ಆಟಗಾರ ಬೆಂಬಲ ನೀಡುವಂತೆ ಮನವಿ ಮಾಡಿತ್ತು ಎನ್ನಲಾಗಿದೆ.

ಬಿಜೆಪಿ ನೀಡಿರುವ ಅವಕಾಶವನ್ನು ಕುಂಬ್ಳೆ ಹಾಗೂ ದ್ರಾವಿಡ್ ಇಬ್ಬರು ನಿರಾಕರಿಸಿದ್ದಾರೆ. ಆದರು ಬಿಜೆಪಿ ಸತತ ಮಾತುಕತೆಗಳನ್ನು ನಡೆಸುತ್ತಿದ್ದು, ಈ ಬಾರಿ ಅಲ್ಲದಿದ್ದರೂ ಮುಂದಿನ ಲೋಕಸಭಾ ಆಥವಾ ರಾಜ್ಯಸಭಾ ಚುನಾವಣೆ ಸ್ಥಾನ ನೀಡುವ ಬಗ್ಗೆ ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಇಬ್ಬರು ಆಟಗಾರರು ಮಾಧ್ಯಮಗಳಿಗೆ ಹೇಳಿಕೆ ನೀಡಲು ನಿರಾಕರಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕ್ರಿಕೆಟ್ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿರುವ ದ್ರಾವಿಡ್ ಸದ್ಯ ಟೀಂ ಇಂಡಿಯಾ ಅಂಡರ್ 19 ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೇ ಕಳೆದ ತಿಂಗಳು ರಾಜ್ಯ ಚುನಾವಣಾ ಆಯೋಗ ದ್ರಾವಿಡ್ ರನ್ನು ವಿಧಾನಸಭಾ ಚುನಾವಣೆಯ ರಾಯಭಾರಿಯನ್ನಾಗಿ ಆಯ್ಕೆ ಮಾಡಿತ್ತು. ಇನ್ನು ಕುಂಬ್ಳೆ ಕ್ರೀಡಾ ನಿರ್ವಹಣೆ ಹಾಗೂ ಕ್ರಿಕೆಟ್ ಅಡ್ಮಿನಿಸ್ಟ್ರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

 

 

Share This Article
Leave a Comment

Leave a Reply

Your email address will not be published. Required fields are marked *