ರಾಯಚೂರು: ಲಾರಿ, ಬುಲೆರೋ ಹಾಗೂ ಟಾಟಾ ಏಸ್ ನಡುವೆ ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಸ್ಕಿಯಲ್ಲಿ ನಡೆದಿದೆ.
ಟಾಟಾ ಏಸ್ ಚಾಲಕ ಲಕ್ಷ್ಮಣ್ ಕಾಟಗಿಹಳ್ಳಿ(40), ಬಸವರಾಜ್ (30) ಮತ್ತು ಶಿವಲಿಂಗಪ್ಪ ಮೃತ ದುರ್ದೈವಿಗಳು. ಅಪಘಾತದಲ್ಲಿ ಮಾಬುಸಾಬ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಸ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಸ್ಕಿಯ ಬೀದರ್ ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಈ ಜಾವ ಅಪಘಾತ ಸಂಭವಿಸಿದ್ದು, ಚಾಲಕರ ಅತೀ ವೇಗ ಹಾಗೂ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ನಡೆದ ಬಳಿಕ ಲಾರಿ ಚಾಲಕ ಹಾಗೂ ಕ್ಲೀನರ್ ಪರಾರಿಯಾಗಿದ್ದಾರೆ.