ಜೆಡಿಎಸ್ ಪರ ಪ್ರಚಾರಕ್ಕಿಳಿದ ಗೀತಾ ಶಿವರಾಜ್ ಕುಮಾರ್

Public TV
0 Min Read

ಶಿವಮೊಗ್ಗ:ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಚುನಾವಣಾ ಪ್ರಚಾರಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಟುಂಬವನ್ನು ನೋಡಿಕೊಳ್ಳುವ ಜವಾಬ್ದಾರಿ ಕೂಡ ನನ್ನ ಮೇಲಿದೆ. ಕೌಟುಂಬಿಕ ಕಾರಣಗಳಿಂದಾಗಿ ಕೆಲ ದಿನ ಸಕ್ರೀಯ ರಾಜಕಾರಣದಿಂದ ದೂರ ಇದ್ದೆ. ಈಗ ಬಿಡುವು ಸಿಕ್ಕಿದೆ ಹಾಗಾಗಿ ಚುನಾವಣಾ ಪ್ರಚಾರದಲ್ಲಿ ಸಂಪೂರ್ಣವಾಗಿ ತೊಡಗಲಿದ್ದೇನೆ ಎಂದು ಹೇಳಿದರು.

ಶಿವಮೊಗ್ಗ ಅಕ್ಕ ಪಕ್ಕದ ಜಿಲ್ಲೆಗಳಲ್ಲಿ ಜೆಡಿಎಸ್ ಪರ ಪ್ರಚಾರ ಮಾಡಲಿದ್ದೇನೆ. ಮೊದಲಿಗೆ ಶಿವಮೊಗ್ಗ ಗ್ರಾಮಾಂತರ, ತೀರ್ಥಹಳ್ಳಿ, ಸೊರಬದಲ್ಲಿ ಪ್ರಚಾರ ಮಾಡಲಿದ್ದೇವೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *