ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆಗೈದು ರುಂಡ, ಮುಂಡ ಬೇರ್ಪಡಿಸಿದ ದುಷ್ಕರ್ಮಿಗಳು!

Public TV
1 Min Read

ಬೆಂಗಳೂರು: ವ್ಯಕ್ತಿಯೊಬ್ಬರ ರುಂಡ ಹಾಗೂ ಮುಂಡ ಬೇರ್ಪಡಿಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಡೇವಿಡ್ (42)ಹತ್ಯೆಯಾದ ವ್ಯಕ್ತಿ. ಗುರುವಾರ ರಾತ್ರಿ ಗಂಗಮ್ಮನಗುಡಿಯ ರಾಮಚಂದ್ರಾಪುರ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ರಾತ್ರಿ ಕೊಲೆ ಮಾಡಿದ್ದು, ಇಂದು ಮುಂಜಾನೆ ಮೃತ ಡೇವಿಡ್ ನ ರುಂಡ ಪತ್ತೆಯಾಗಿದೆ.

ಜೋರಾಗಿ ಬರುತ್ತಿದ್ದ ಮಳೆಯಲ್ಲೇ ದುಷ್ಕರ್ಮಿಗಳು ಡೇವಿಡ್ ನ ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ಹೊಡೆದು ಕೊಂದಿದ್ದಾರೆ. ಬಳಿಕ ಡೇವಿಡ್ ನ ರುಂಡ ಒಂದು ಕಡೆ, ಮುಂಡ ಒಂದು ಕಡೆ ಬೀಸಾಕಿ ತಮ್ಮ ವಿಕೃತ ಮೆರೆದಿದ್ದಾರೆ ಎನ್ನಲಾಗಿದೆ.

ಈ ಕುರಿತು ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಡೇವಿಡ್ ನ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *