ಶೋಕಸಾಗರದಲ್ಲಿ ಮುಳುಗಿದ ತಮಿಳುನಾಡು- ಹೃದಯಾಘಾತದಿಂದ ಮೂವರ ದುರ್ಮರಣ

Public TV
2 Min Read

ಚೆನ್ನೈ: ಕಳೆದ ವರ್ಷ ಜಯಲಲಿತಾರನ್ನ, ಈಗ ಕರುಣಾನಿಧಿಯನ್ನು ಕಳೆದುಕೊಂಡಿರುವ ತಮಿಳುನಾಡು ಜನ ಶೋಕಸಾಗರದಲ್ಲಿ ಮುಳುಗಿದ್ದಾರೆ. ಅಯ್ಯ.. ಅಯ್ಯ ಎಂದು ಕಣ್ಣೀರಿಟ್ಟು ಗೋಳಾಡುತ್ತಿದ್ದಾರೆ.

ನೆಚ್ಚಿನ ನಾಯಕನ ಸಾವಿನ ಸುದ್ದಿ ಕೇಳಿ ಮೂವರು ಹೃದಯಾಘಾತದಿಂದ ಮೃತಪಟ್ಟಿದಾರೆ. ಇನ್ನು ಅಗಲಿದ ನಾಯಕನ ಗೌರವಾರ್ಥ ಏಳು ದಿನ ಶೋಕಾಚರಣೆ ಆಚರಿಸಲು ಸರಕಾರ ಆದೇಶಿಸಿದೆ. ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಿ ಗೌರವ ಸೂಚಿಸಲಾಗಿದೆ. ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲೂ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಿ ಗೌರವ ಸೂಚಿಸಲಾಗುತ್ತದೆ.

ಕರ್ನಾಟದಲ್ಲೂ ಇಂದು ಶೋಕಾಚರಣೆ ಘೋಷಣೆ ಮಾಡಲಾಗಿದೆ. ಸಂಜೆ ಹೊತ್ತಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದ್ದು, ಪ್ರಧಾನಿ ಮೋದಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಕುಮಾರಸ್ವಾಮಿ, ಸೇರಿದಂತೆ ವಿವಿಧ ರಾಜ್ಯದ ಮುಖ್ಯಮಂತ್ರಿಗಳು, ಸೇರಿದಂತೆ ಗಣ್ಯಾತಿ ಗಣ್ಯರ ಭಾಗವಹಿಸಲಿದ್ದಾರೆ. ಪತ್ನಿಯರಿಬ್ಬರು, ನಾಲ್ವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿರುವ ಮುತ್ತುವೇಲು ನಿಧನಕ್ಕೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಕರುಣಾನಿಧಿ ಆಸ್ಪತ್ರೆಗೆ ದಾಖಲಾಗಿದ್ದ ವಿಷಯ ತಿಳಿದು 21 ಮಂದಿ ದುರ್ಮರಣ!

 ಘಟನೆ ವಿವರ:
ತಮಿಳುನಾಡಿನ ಮಾಜಿ ಸಿಎಂ ಮತ್ತು ಡಿಎಂಕೆ ಮುಖ್ಯಸ್ಥ ಎಂ. ಕಲೈನರ್ ಕರುಣಾನಿಧಿ(94) ಅವರು ಉಸಿರಾಟದ ತೊಂದರೆ, ಜ್ವರ ಹಾಗೂ ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಜುಲೈ 22ರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 22ರ ಬಳಿಕ ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ ಆರೋಗ್ಯದಲ್ಲಿ ಮತ್ತೇ ಏರಿಳಿತ ಕಂಡು ಬಂದ ಹಿನ್ನೆಲೆಯಲ್ಲಿ ಕರುಣಾನಿಧಿ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾವೇರಿ ಆಸ್ಪತ್ರೆ ವೈದ್ಯರು ಸೋಮವಾರವೇ 24 ಗಂಟೆಗಳ ಕಾಲ ಯಾವ ಭರವಸೆಗಳನ್ನು ನೀಡೋದಕ್ಕೆ ಸಾಧ್ಯವಿಲ್ಲ. ಕ್ಷಣ ಕ್ಷಣಕ್ಕೂ ಕರುಣಾನಿಧಿ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಸ್ಪಷ್ಟಪಡಿಸಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ ವಿಧಿವಶರಾದ್ರು. ಇದನ್ನೂ ಓದಿ: ರಾಜಾಜಿಹಾಲ್‍ನಲ್ಲಿ ಕರುಣಾನಿಧಿ ಪಾರ್ಥಿವ ಶರೀರ-ಸಾವಿರಾರು ಜನರಿಂದ ಅಂತಿಮ ದರ್ಶನ

ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ರಾತ್ರಿ 9.30ರ ಸುಮಾರಿಗೆ ಕಾವೇರಿ ಆಸ್ಪತ್ರೆಯಿಂದ ಗೋಪಾಲಪುರಂ ನಿವಾಸಕ್ಕೆ ಕೊಂಡೊಯ್ದು ಅಂತಿಮ ದರ್ಶನಕ್ಕಿಡಲಾಗಿತ್ತು. ಈ ವೇಳೆ ನಟ ರಜಿನಿಕಾಂತ್, ಪಶ್ಚಿಮಗಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆದರು. ಬಳಿಕ ಮಧ್ಯರಾತ್ರಿ 1.30 ರ ಸುಮಾರಿಗೆ ಸಿಐಟಿ ಕಾಲೋನಿಯಲ್ಲಿರುವ ಪುತ್ರಿ ಕನಿಮೋಳಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯ್ತು. ನಸುಕಿನ ಜಾವ 5.30ರ ನಂತರ ರಾಜಾಜಿ ಹಾಲ್‍ನಲ್ಲಿ ಸಾರ್ವಜನಿಕ ದರ್ಶನಕ್ಕಿಡಲಾಗಿದ್ದು, ಸಾಗರೋಪಾದಿಯಲ್ಲಿ ಜನ ಹರಿದು ಬರ್ತಿದ್ದಾರೆ.

ಐದು ಬಾರಿ ಮುಖ್ಯಮಂತ್ರಿ:
ಕರುಣಾನಿಧಿ ಅವರು 1924 ಜೂನ್ 3ರಂದು ಮದ್ರಾಸ್ ನ ನಾಗಪಟ್ಟಿನಂ ಜಿಲ್ಲೆಯ ಥಿರುಕ್ಕುವಲೈ ನಲ್ಲಿ ಜನಿಸಿದ್ದರು. ತಮಿಳುನಾಡಿನ ಮೂರನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ತಮಿಳುನಾಡಿನ ರಾಜಕೀಯ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ ನ ಅಧ್ಯಕ್ಷರಾಗಿದ್ದರು. 1969 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಮತ್ತೆ 2006 ಮೇ 13 ರಂದು ಐದನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *