ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಆರ್ಥಿಕ ಅಪರಾಧ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಡಿ.ಕೆ. ಶಿವಕುಮಾರ್ ಜೊತೆಗೆ ಸುನಿಲ್ ಶರ್ಮಾ, ಆಂಜನೇಯ, ರಾಜೇಂದ್ರಗೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ತಲಾ 25 ಸಾವಿರ ಶ್ಯೂರಿಟಿ, ತನಿಖೆಗೆ ಸಹಕರಿಸಬೇಕು ಎಂದು ಕೋರ್ಟ್ ಷರತ್ತು ವಿಧಿಸಿದೆ.
ದೆಹಲಿ ನಿವಾಸದಲ್ಲಿ ಪತ್ತೆಯಾದ 8.5 ಕೋಟಿ ರೂ. ಸಿಕ್ಕ ಹಣದ ಸಂಬಂಧ ಆದಾಯ ತೆರಿಗೆ ಇಲಾಖೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿತ್ತು. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ನೀಡಿರುವ ದೂರಿನಲ್ಲಿ ಹವಾಲ ಹಣದ ವಿವರವನ್ನು ಉಲ್ಲೇಖಿಸಿತ್ತು.
ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಐಟಿ ಇಲಾಖೆ ಹಿರಿಯ ಅಧಿಕಾರಿಗಳು ಈ ಹಿಂದೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ನೀಡಿರುವ ದೂರಿನಲ್ಲಿ ಹವಾಲ ಹಣದ ವಿವರವನ್ನು ಉಲ್ಲೇಖಿಸಿದ್ದಾರೆ. ಈ ದೂರಿನಲ್ಲಿ ಹವಾಲ ಹಣದ ಮೂಲಕ ಕೋಟಿ ಕೋಟಿ ಹಣವನ್ನು ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಕಳುಹಿಸಿಕೊಟ್ಟಿದ್ದಾರೆ ಎಂಬ ಆರೋಪಗಳನ್ನು ಮಾಡಲಾಗಿದೆ.
ಐಟಿ ದಾಳಿಯಾದ ಬಳಿಕ ಪತ್ತೆಯಾದ ಡೈರಿಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಡಿಕೆ ಶಿವಕುಮಾರ್ ಮತ್ತು ಆರೋಪಿಗಳನ್ನು ವಿಚಾರಣೆ ನಡೆಸಿದ್ದರು. ಕೆಜಿ ಎಂಬ ಕೋಡ್ ವರ್ಡ್ ಬಳಸಿ ನಗದು ವ್ಯವಹಾರ ನಡೆಸುತ್ತಿದ್ದಾರೆ ಎನ್ನುವ ಅನುಮಾನದ ಮೇರೆಗೆ ಅಧಿಕಾರಿಗಳು ಆರೋಪಿಗಳಿಗೆ ಪ್ರಶ್ನೆ ಕೇಳಿದ್ದಾರೆ. ಆದರೆ ಈ ಪ್ರಶ್ನೆಗಳಿಗೆ ಆರೋಪಿಗಳಿಂದ ಸರಿಯಾದ ಉತ್ತರ ಸಿಕ್ಕಿರಲಿಲ್ಲ ಎನ್ನುವ ಮಾಹಿತಿ ಮೂಲಗಳಿಂದ ಸಿಕ್ಕಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv