ಬೆಂಗಳೂರು: ಕಾಲೇಜು ಮುಗಿಸಿಕೊಂಡು ಮನೆಗೆ ತೆರಳಲು ರಸ್ತೆ ದಾಟುವಾಗ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ವಿಧ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಹೊಸೂರು ಮುಖ್ಯ ರಸ್ತೆಯ ಹೆನ್ನಾಗರ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ.
ಪವಿತ್ರ(17) ಮೃತ ವಿದ್ಯಾರ್ಥಿನಿ. ಈಕೆ ಹೊಸರೋಡ್ ನಿವಾಸಿ ಅಂತ ಗುರುತಿಸಲಾಗಿದೆ. ಪವಿತ್ರ ಹೆನ್ನಾಗರ ಬಳಿಯ ಬಿ.ಟಿ.ಎಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಪವಿತ್ರ ಶನಿವಾರ ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಳು. ಆಗ ಹೆನ್ನಾಗರ ಬಸ್ ನಿಲ್ದಾಣದ ಬಳಿ ರಸ್ತೆ ದಾಟುವಾಗ ವೇಗವಾಗಿ ಬಂದಂತಹ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ ಪಟ್ಟಿದ್ದಾಳೆ.
ಆ ರಸ್ತೆಯಲ್ಲಿ ರಸ್ತೆ ದಾಟುವಾಗ ಸಾಕಷ್ಟು ಅಪಘಾತಗಳು ಸಂಭವಿಸುತ್ತಿದ್ದು, ಆ ಜಾಗದಲ್ಲಿ ಸ್ಕೈವಾಕ್ ನಿರ್ಮಾಣ ಮಾಡಿದ್ದರು ಸಹ ಜನ ಅದನ್ನು ಬಳಸದೆ ರಸ್ತೆ ದಾಟಲು ಮುಂದಾಗಿ ಇಂತಹ ಅಪಘಾತಗಳು ಹೆಚ್ಚಾಗುತ್ತಲೇ ಇವೆ. ಈ ಘಟನೆ ಬಗ್ಗೆ ತಿಳಿದ ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv