ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸುಷ್ಮಾ ಸ್ವರಾಜ್

Public TV
1 Min Read

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಮಧ್ಯಪ್ರದೇಶದ ಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುಷ್ಮಾ ಸ್ವರಾಜ್ ಅವರು ಈ ಕುರಿತು ಹೇಳಿಕೆ ನೀಡಿದ್ದು, ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಾರದು ಎಂದು ತೀರ್ಮಾನ ಮಾಡಿದ್ದೇನೆ. ಆದರೆ ಈ ಕುರಿತು ಪಕ್ಷ ಅಂತಿಮ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ತಮ್ಮ ತೀರ್ಮಾನದ ಕುರಿತು 66 ವರ್ಷದ ಸುಷ್ಮಾ ಅವರು ಪಕ್ಷದ ಮುಖಂಡರಿಗೆ ಮಾಹಿತಿ ನೀಡಿದ್ದಾಗಿ ಸ್ಪಷ್ಟನೆ ನೀಡಿದ್ದು, ಅವರ ಈ ತೀರ್ಮಾನಕ್ಕೆ ಆರೋಗ್ಯ ಸಮಸ್ಯೆಯೇ ಕಾರಣ ಎನ್ನಲಾಗಿದೆ.

ಸುಷ್ಮಾ ಸ್ವರಾಜ್ ಅವರು ಮಧ್ಯಪ್ರದೇಶದ ವಿದಿಶಾ ಕ್ಷೇತ್ರದ ಸಂಸದರಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಸುಷ್ಮಾ ಸ್ವರಾಜ್ ಅವರು ಪಾರ್ಲಿಮೆಂಟರಿಗೆ ಗೈರಾಗಿದ್ದ ಕುರಿತ ಪ್ರಶ್ನೆ ಮಾಡಿ ಕ್ಷೇತ್ರದಲ್ಲಿ ಪೋಸ್ಟರ್ ಚಳುವಳಿ ಮಾಡಲಾಗಿತ್ತು. ಈ ಪ್ರತಿಭಟನೆ ಕುರಿತು ಇಂದು ಮಾಧ್ಯಮಗಳು ಪ್ರಶ್ನೆ ಮಾಡಿದ ವೇಳೆ ಸುಷ್ಮಾ ಸ್ವರಾಜ್ ತಮ್ಮ ನಿರ್ಧಾರವನ್ನು ಪ್ರಕಟಿಸಿದರು. ಆದರೆ ಸುಷ್ಮಾ ಸ್ವರಾಜ್ ಅವರ ಕಾರ್ಯಕ್ಷಮತೆ, ವಿದೇಶಿ ವ್ಯವಹಾರದಲ್ಲಿನ ಅವರ ಕೌಶಲ್ಯಗಳು ಹಾಗೂ ಸದನದಲ್ಲಿನ ಅವರ ನಿರ್ವಹಣೆಯನ್ನು ಗಮನದಲ್ಲಿಟ್ಟುಕೊಂಡು ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಸಾಧ್ಯತೆಗಳಿವೆ.

ಕುಟುಂಬ ಮೂಲಗಳ ಮಾಹಿತಿ ಅನ್ವಯ ಸುಷ್ಮಾ ಸ್ವರಾಜ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಈ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ ಸುಷ್ಮಾ ಅವರು ತಮ್ಮ ಜೀವನದಲ್ಲಿ 11 ಚುನಾವಣೆಗಳನ್ನು ಎದುರಿಸಿದ್ದು, ಅವರ ನಿರ್ಧಾರದ ಹಿಂದೆ ರಾಜಕೀಯ ಕಾರಣಗಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. 2016 ರಲ್ಲಿ ಕಿಡ್ನಿ ಕಸಿಗೆ ಒಳಗಾಗಿದ್ದ ಸುಷ್ಮಾ ಸ್ವರಾಜ್ ಅವರು ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article
Leave a Comment

Leave a Reply

Your email address will not be published. Required fields are marked *