ಇಂದು ಕರ್ಮಭೂಮಿ ರಾಮನಗರಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ

Public TV
1 Min Read

-ದೇವೇಗೌಡರ ಕಂಚಿನ ಪ್ರತಿಮೆ ಅನಾವರಣಗೊಳಿಸಲಿರುವ ಸಿಎಂ

ರಾಮನಗರ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಕಂಚಿನ ಪ್ರತಿಮೆಯ ಅನಾವರಣಕ್ಕೆ ಸಿಎಂ ಎಚ್.ಡಿ ಕುಮಾರಸ್ವಾಮಿ ಇಂದು ತಮ್ಮ ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ಆಗಮಿಸಲಿದ್ದಾರೆ. ಇಗ್ಗಲೂರು ಜಲಾಶಯದ ನಿರ್ಮಾಣ ಹಾಗೂ ಏತ ನೀರಾವರಿ ಯೋಜನೆಗೆ ನೀಡಿದ ಕೊಡುಗೆ ಸ್ಮರಿಸಿ ಸಾವಂದಿಪುರ ಗ್ರಾಮದಲ್ಲಿ ದೇವೇಗೌಡರ ಕಂಚಿನ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ.

ದೇವೇಗೌಡರ ಅಭಿಮಾನಿ ಬಳಗ ಹಾಗೂ ಜೆಡಿಎಸ್ ಮುಖಂಡರು ಸುಮಾರು 13 ಲಕ್ಷ ವೆಚ್ಚದಲ್ಲಿ 6.7 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಮಾಡಿದ್ದಾರೆ. ಇಗ್ಗಲೂರು ಜಲಾಶಯದ ಪಕ್ಕದಲ್ಲಿನ ಸಾವಂದಿಪುರ ಹಾಗೂ ಸಾಮಂಧಿಪುರ ಗ್ರಾಮಗಳ ನಡುವಿನ ಸರ್ಕಲ್‍ನಲ್ಲಿ ಪ್ರತಿಮೆಯನ್ನ ಪ್ರತಿಷ್ಠಾಪನೆ ಮಾಡಲಾಗುವುದು. ಕಾರ್ಯಕ್ರಮಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ, ಸಿಎಂ ಎಚ್.ಡಿ ಕುಮಾರಸ್ವಾಮಿ, ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಹಾಗೂ ಆದಿಚುಂಚನಗಿರಿ ಕ್ಷೇತ್ರದ ನಿರ್ಮಲಾನಂದಸ್ವಾಮೀಜಿ ಸೇರಿದಂತೆ ವಿವಿಧ ಮಠಗಳ ಮಠಾಧೀಶರು ಆಗಮಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಚನ್ನಪಟ್ಟಣ ತಾಲೂಕಿನ ಪ್ರತಿ ಗ್ರಾಮದ ಜನರು ಬರಲಿದ್ದಾರೆ. ಜೆಡಿಎಸ್ ಪಕ್ಷದ ಎಲ್ಲ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 13 ಲಕ್ಷ ವೆಚ್ಚದಲ್ಲಿ 6.7 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಮಾಡಲಾಗಿದೆ ಎಂದು ಚನ್ನಪಟ್ಟಣ ತಾಲೂಕು ಜೆಡಿಎಸ್ ಅದ್ಯಕ್ಷ ಜಯಮುತ್ತು ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *