ಚುನಾವಣೆಯಲ್ಲಿ ಪಕ್ಷ ಸೋತರೆ ಹೊಣೆ ಯಾರದ್ದು – ಗಡ್ಕರಿ ಖಡಕ್ ಮಾತು

Public TV
1 Min Read

ನವದೆಹಲಿ: ಸಂಸದರು ಹಾಗೂ ಶಾಸಕರ ಕಾರ್ಯವೈಖರಿ ಸರಿ ಇಲ್ಲದಿದ್ದರೆ ಅದಕ್ಕೆ ನೇರವಾಗಿ ಪಕ್ಷದ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಇತ್ತೀಚೆಗೆ ನಡೆದ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಢ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೀವ್ರವಾಗಿ ಮುಖಭಂಗ ಅನುಭವಿಸಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಗಡ್ಕರಿಯವರು, ಚುನಾವಣೆಯಲ್ಲಿ ಸೋತರೆ ಪಕ್ಷದ ನಾಯಕರೇ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ. ಅಲ್ಲದೇ ಸೋಲಿನ ಹೊಣೆಯನ್ನು ಹೊರುವುದು ಸಹ ನಾಯಕತ್ವದ ಭಾಗ ಎಂದಿದ್ದಾರೆ.

ತಮ್ಮ ಹೇಳಿಕೆಯನ್ನು ದೆಹಲಿಯ ವಿಜ್ಞಾನ್ ಭವನದಲ್ಲಿ ನಡೆದ 31ನೇ ಗುಪ್ತಚರ ಇಲಾಖಾ ಅಧಿಕಾರಿಗಳ ಎಂಡೋಮೆಂಟ್ ಉಪನ್ಯಾಸ ಕಾರ್ಯಕ್ರಮದಲ್ಲಿ ಮತ್ತೊಮ್ಮೆ ಸಮರ್ಥಿಸಿಕೊಂಡು ಮಾತನಾಡಿದ ಅವರು, ಗೃಹ ಸಚಿವಾಲಯದ ಯಶಸ್ಸಿಗೆ ತರಬೇತಿ ಹಾಗೂ ನೈಪುಣ್ಯತೆಯನ್ನು ಪಡೆದ ಐಪಿಎಸ್ ಅಧಿಕಾರಿಗಳು ಕಾರಣರಾಗುತ್ತಾರೆ. ಏಕೆಂದರೆ ಈ ಎಲ್ಲಾ ಅಧಿಕಾರಿಗಳು ಉತ್ತಮವಾಗಿ ಕೆಲಸ ನಿರ್ವಹಿಸಿದ್ದರಿಂದ ಯಶಸ್ಸು ಕಂಡಿದೆ. ಆದರೆ ನಾನು ಪಕ್ಷದ ಅಧ್ಯಕ್ಷನಾಗಿದ್ದುಕೊಂಡು ಸಂಸದರು ಹಾಗೂ ಶಾಸಕರು ಸರಿಯಾಗಿ ಕಾರ್ಯ ನಿರ್ವಹಿಸದೇ ಇದ್ದರೆ ಯಾರು ಜವಾಬ್ದಾರರು ಎಂದು ಪ್ರಶ್ನಿಸಿದ್ದಾರೆ.

ಈ ಕಾರಣಕ್ಕಾಗಿ ಸಂಸದರು ಹಾಗೂ ಶಾಸಕರು ಆಯಾ ರಾಜ್ಯಗಳಲ್ಲಿ ಸರಿಯಾಗಿ ಕೆಲಸ ನಿರ್ವಹಿಸದೇ ಇದ್ದರೆ, ಅದಕ್ಕೆ ನೇರವಾಗಿ ಪಕ್ಷದ ಮುಖ್ಯಸ್ಥರೇ ಹೊಣೆಗಾರರನ್ನಾಗಿ ಮಾಡಬೇಕೆಂದು ಹೇಳಿದ್ದಾರೆ.

ತಮ್ಮ ಹೇಳಿಕೆ ಸಂಬಂಧ ಇಲ್ಲಸಲ್ಲದ ಮಾಹಿತಿಗಳನ್ನು ಹರಡುವ ಮೂಲಕ ಪಕ್ಷ ಹಾಗೂ ತಮ್ಮ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಕೆಲವು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಯತ್ನಿಸುತ್ತಿದ್ದಾರೆಂದು ತಮ್ಮ ಟ್ವಿಟ್ಟರ್ ನಲ್ಲಿ ಗಡ್ಕರಿ ಬರೆದುಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *