ಆಪರೇಷನ್ ಕಮಲ ಫೇಲ್ – ರಾಹುಲ್ ಗಾಂಧಿ ಫುಲ್ ಖುಷ್

Public TV
1 Min Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸುದ್ದಿಯಾಗಿದ್ದ ಸಂಕ್ರಾಂತಿಯ ಆಪರೇಷನ್ ಕಮಲ ಫೇಲ್ ಆಗುತ್ತಿದಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫುಲ್ ಆಗಿದ್ದು, ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ವೇಣುಗೋಪಾಲ್ ಅವರು ರಾಜ್ಯ ನಾಯಕರೊಂದಿಗೆ ಸೇರಿ ಸರ್ಕಾರ ವಿರುದ್ಧ ಅಸಮಾಧಾನಗೊಂಡು ರಾಜೀನಾಮೆ ನೀಡಲು ಮುಂದಾಗಿದ್ದ ಶಾಸಕರ ಮನವೊಲಿಕೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೇ ಪಕ್ಷದಲ್ಲಿ ನಿರ್ಮಾಣವಾಗಿದ್ದ ಗೊಂದಲದ ವಾತಾವರಣವನ್ನು ಕೂಡ ಉತ್ತಮವಾಗಿ ನಿಭಾಯಿಸಿದ್ದರು. ಈ ಕಾರ್ಯಕ್ಕೆ ವೇಣುಗೋಪಾಲ್ ಅವರಿಗೆ ರಾಹುಲ್ ಗಾಂಧಿ “ಗುಡ್ ಜಾಬ್, ವೆಲ್‍ಡನ್” ಎಂದು ಪ್ರಶಂಸಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

ಸರ್ಕಾರದ ವಿರುದ್ಧ ಅಸಮಾಧಾನಿತ ಶಾಸಕರು ಮುಂಬೈ ಹೋಟೆಲ್ ಸೇರಿದ್ದಾರೆ ಎಂಬ ಮಾಹಿತಿ ಪಡೆದ ಕೂಡಲೇ ರಾಹುಲ್ ಗಾಂಧಿ ಅವರು ವೇಣುಗೋಪಾಲ್ ಅವರನ್ನು ರಾಜ್ಯಕ್ಕೆ ತೆರಳುವಂತೆ ಸೂಚಿದ್ದರು. ಅಲ್ಲದೇ ಯಾವುದೇ ಕಾರಣಕ್ಕೂ ಸಮಿಶ್ರ ಸರ್ಕಾರಕ್ಕೆ ಧಕ್ಕೆ ಆಗದಂತೆ ಸಮಸ್ಯೆಯನ್ನು ಪರಿಹಾರ ಮಾಡುವಂತೆ ಸೂಚಿಸಿದ್ದರು. ಈ ಕಾರ್ಯದಲ್ಲಿ ವೇಣುಗೋಪಾಲ್ ಅವರು ಸಕ್ಸಸ್ ಆಗಿದ್ದು, ಬಿಜೆಪಿಯ ಆಪರೇಷನ್ ಕಮಲ ವಿಫಲವಾಗಿದೆ.

ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವೇಣುಗೋಪಾಲ್, ಪಕ್ಷದ ಎಲ್ಲಾ ಶಾಸಕರೂ ನಮ್ಮ ಸಂಪರ್ಕದಲ್ಲಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಮುಂದುವರಿಯುತ್ತದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಅಲ್ಲದೇ ಮುಂಬೈನಲ್ಲಿರುವ ಎಲ್ಲಾ ಶಾಸಕರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಶುಕ್ರವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಸಭೆಯಲ್ಲಿ ಎಲ್ಲಾ ಶಾಸಕರು ಭಾಗವಹಿಸುತ್ತಾರೆ. ಇದು ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ವಿರುದ್ಧ ನಡೆದ ಹೋರಾಟ ಎಂದು ಹೇಳಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Share This Article
Leave a Comment

Leave a Reply

Your email address will not be published. Required fields are marked *