ಬೆಳಗಾವಿ/ಚಿಕ್ಕೋಡಿ: ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದ ಬಳಿ ದ್ರಾಕ್ಷಿ ಹಣ್ಣು ಸಾಗಿಸುತ್ತಿದ್ದ ಐಸರ್ ವಾಹನ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದಾರೆ.
ಜೇವರ್ಗಿ-ಸಂಕೇಶ್ವರ್ ರಾಜ್ಯ ಹೆದ್ದಾರಿಯಲ್ಲಿ ತಡರಾತ್ರಿ ಅಪಘಾತ ನಡೆದಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತರನ್ನು ಸುವರ್ಣ ಧನ್ಯಪ್ಪಗೊಳ, ಮಾದೇವಿ ಪಡಸಲಗಿ ಮತ್ತು ರಾಜು ನೇಸರ ಎಂದು ಗುರುತಿಸಲಾಗಿದೆ. ಇವರೆಲ್ಲರು ವಿಜಯಪುರ ಜಿಲ್ಲೆಯ ಧನ್ಯಾಳ, ದಾಶ್ಯಾಳ ಹಾಗು ರಾಂಪುರದ ನಿವಾಸಿಗಳೆಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಲ್ಟಿಯಾಗಿ ರಸ್ತೆ ಬದಿಯ ಹಳ್ಳದಲ್ಲಿ ಬಿದ್ದಿದ್ದ ಲಾರಿಯನ್ನು ಜೆಸಿಬಿ ಮೂಲಕ ಎತ್ತಲಾಗಿದೆ.
ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv