ಅಭಿನಂದನ್ ಬಿಡುಗಡೆ ವಿರೋಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪಾಕ್ ಕಾರ್ಯಕರ್ತರು

Public TV
1 Min Read

ಇಸ್ಲಾಮಾಬಾದ್: ಭಾರತೀಯ ವಾಯು ಪಡೆಯ ಪೈಲಟ್ ಅಭಿನಂದನ್ ಅವರ ಬಿಡುಗಡೆ ವಿರೋಧಿಸಿ ಪಾಕಿಸ್ತಾನದ ಕೆಲ ಸಂಘಟನೆಯ ಕಾರ್ಯಕರ್ತರು ಪಾಕ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಪಾಕಿಸ್ತಾನದ ಬಂಧನಲ್ಲಿರುವ ಪೈಲಟ್ ಅಭಿನಂದನ್ ಅವರನ್ನು ಇಂದು ಮಧ್ಯಾಹ್ನ ಬಿಡುಗಡೆ ಮಾಡಲು ಪಾಕಿಸ್ತಾನ ಸರ್ಕಾರ ಗುರುವಾರ ಸಂಜೆ ನಿರ್ಧರಿಸಿತ್ತು. ಈ ನಿಟ್ಟಿನಲ್ಲಿ ಅಭಿನಂದನ್ ಅವರನ್ನು ಪಂಜಾಬ್‍ನ ವಾಘಾ ಗಡಿಯಿಂದ ಭಾರತಕ್ಕೆ ಕಳುಹಿಸಲು ಸಿದ್ಧತೆ ನಡೆಸಿದೆ. ಆದರೆ ಕೆಲ ಕಾರ್ಯಕರ್ತರು ಪಾಕ್ ನಿರ್ಧಾರವನ್ನು ಖಂಡಿಸಿ ಪ್ರತಿಭಟನೆ ಆರಂಭಿಸಿದ್ದಾರೆ. ಅಷ್ಟೇ ಅಲ್ಲದೇ ಸುಪ್ರೀಂ ಕೋರ್ಟ್ ನಲ್ಲಿ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಿಡುಗಡೆಗೆ ತಡೆ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಆಕಾಶದಲ್ಲಿ ನಡೆದ ಕಾಳಗದಲ್ಲಿ ಅಭಿನಂದನ್ ಅವರು ಪಾಕಿಸ್ತಾನ ಎಫ್ 16 ವಿಮಾನವನ್ನು ಹೊಡೆದು ಉರುಳಿಸಿದ್ದರು. ಈ ಸಮಯದಲ್ಲಿ ಪಾಕಿಸ್ತಾನ ವಿಮಾನಗಳು ಪ್ರತಿ ದಾಳಿ ನಡೆಸಿದ ಪರಿಣಾಮ ಮಿಗ್ ವಿಮಾನ ಪತನಗೊಂಡಿತ್ತು. ಪ್ಯಾರಾಚೂಟ್ ಸಹಾಯದಿಂದ ಕೆಳಗೆ ಹಾರಿ ಅಭಿನಂದನ್ ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ ಅವರು ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಬಿದ್ದಿದ್ದರಿಂದ ಸ್ಥಳೀಯರಿಂದ ಹಲ್ಲೆಗೆ ಒಳಗಾಗಿ ಪಾಕಿಸ್ತಾನ ಸೇನೆಯ ಬಂಧನಕ್ಕೆ ಒಳಗಾಗಿದ್ದರು.

ಅಭಿನಂದನ್ ಅವರಿಂದ ಭಾರತೀಯ ವಾಯು ಪಡೆಯ ಮಾಹಿತಿಯನ್ನು ಪಡೆಯಲು ಪಾಕ್ ಸೇನೆ ಯತ್ನಿಸಿತ್ತು. ಆದರೆ ಅಭಿನಂದನ್ ಅವರು ಧೈರ್ಯವಾಗಿ ಎಲ್ಲವನ್ನೂ ಎದುರಿಸಿ, ಯಾವುದೇ ಮಾಹಿತಿ ನೀಡಿರಲಿಲ್ಲ. ಇತ್ತ ಭಾರತ ಸರ್ಕಾರ ಸರ್ಕಾರವು ಅಭಿನಂದನ್ ಬಿಡುಗಡೆಗೆ ಪಾಕ್ ಸರ್ಕಾರದ ಮೇಲೆ ಭಾರೀ ಒತ್ತಡ ಹಾಕಿತ್ತು. ಇದಕ್ಕೆ ಮನಿದ ಪಾಕ್ ಜಿನೀವಾ ಒಪ್ಪಂದಂತೆ ಪೈಲಟ್ ಅಭಿನಂದನ್ ಅವರನ್ನು ಹಸ್ತಾಂತರಿಸಲು ನಿರ್ಧರಿಸಿದೆ.

https://www.youtube.com/watch?v=MiFS_D76l_A

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *