– ಕೊಠಡಿಯಲ್ಲಿ ವಿಡಿಯೋ ರೆಕಾರ್ಡ್
ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಮಳೂರು ಗ್ರಾಮದಲ್ಲಿ ಮಕ್ಕಳಿಗೆ ನೈತಿಕತೆಯ ಪಾಠ ಮಾಡಬೇಕಾದ ಪ್ರಾಂಶುಪಾಲನೊಬ್ಬ ಸಹೋದ್ಯೋಗಿ ಜೊತೆ ಚಕ್ಕಂದವಾಡುತ್ತಿದ್ದಾಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಮೊರಾರ್ಜಿ ವಸತಿ ಶಾಲೆಯ ಪ್ರಿನ್ಸಿಪಾಲ್ ಚಂದ್ರಪ್ಪ ಈ ರೀತಿ ಶಾಲೆಯಲ್ಲೇ ರೊಮ್ಯಾನ್ಸ್ ಮಾಡಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಈ ವಸತಿ ಶಾಲೆಯಲ್ಲಿ ಆರನೇ ತರಗತಿಯಿಂದ ಹತ್ತನೇ ತರಗತಿವರೆಗೆ ಸುಮಾರು 250 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಜೊತೆಗೆ ಶಿಕ್ಷಕರು, ಶಿಕ್ಷಕಿಯರು, ಅಡುಗೆಯವರು ಮತ್ತು ಅಡುಗೆ ಸಹಾಯಕರು ಸೇರಿ 20 ಮಂದಿ ಇಲ್ಲಿನ ಕ್ವಾರ್ಟರ್ಸ್ ಗಳಲ್ಲಿ ವಾಸವಾಗಿದ್ದಾರೆ.
ಸುಪ್ರೀಂಕೋರ್ಟ್ ಆದೇಶವಿದೆ ಎಂದ:
ಈ ವಸತಿ ಶಾಲೆಯ ಉದ್ಯೋಗಿಯಾಗಿ ಬಂದ ಮಹಿಳೆಯೊಬ್ಬರ ಜೊತೆ ಪ್ರಿನ್ಸಿಪಾಲ್ ಚಂದ್ರಪ್ಪ ಚಕ್ಕಂದ ಶುರು ಮಾಡಿದ್ದಾನೆ. ಕದ್ದುಮುಚ್ಚಿ ನಡೆಯುತ್ತಿದ್ದ ಇವರಿಬ್ಬರ ಪ್ರೀತಿ ಶಾಲೆಯ ಇನ್ನಿತರ ಶಿಕ್ಷಕರು ಹಾಗೂ ಮಕ್ಕಳಿಗೂ ಗೊತ್ತಾಗಿದೆ. ಈ ಬಗ್ಗೆ ಗ್ರಾಮಸ್ಥರು ಆಕ್ಷೇಪ ಮಾಡಿದಾಗ, ಸುಪ್ರೀಂಕೋರ್ಟ್ ಆದೇಶ ಇದೆ. ಯಾರು ಯಾರ ಜೊತೆ ಬೇಕಾದರೂ ಸಂಬಂಧ ಇಟ್ಟುಕೊಳ್ಳಬಹುದು ಎಂದು ಅವಾಜ್ ಹಾಕಿದ್ದಾನೆ.
ಅಷ್ಟೇ ಅಲ್ಲದೆ ಇವರಿಬ್ಬರು ಇತ್ತೀಚೆಗೆ ಅಡುಗೆ ಸಾಮಾಗ್ರಿಗಳಿದ್ದ ರೂಮಿನಲ್ಲಿ ಅಪ್ಪಿಕೊಂಡು ರೊಮ್ಯಾನ್ಸ್ ಮಾಡಿದ್ದಾರೆ. ಇದನ್ನು ಅವರಿಗೆ ಗೊತ್ತಾಗದೇ ರೀತಿಯಲ್ಲಿ ಕಿಟಕಿಯಿಂದ ವಿಡಿಯೋ ಮಾಡಲಾಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಸಮಾಜ ಕಲ್ಯಾಣ ಇಲಾಖೆ ಸುಪರ್ದಿಯಲ್ಲಿರುವ ಈ ಶಾಲೆಯ ಪ್ರಿನ್ಸಿಪಾಲ್ ರೊಮ್ಯಾನ್ಸ್ ವಿಷಯ ಹಿರಿಯ ಅಧಿಕಾರಿಗಳಿಗೆ ತಿಳಿದಿದ್ದರೂ, ಸೂಕ್ತ ಕ್ರಮ ಕೈಗೊಳ್ಳದೆ ಸಂಬಂಧವೇ ಇಲ್ಲವೇನು ಎಂಬಂತೆ ಇದ್ದಾರೆ. ಇಂತಹ ವಿಷಯದಿಂದ ಮಕ್ಕಳ ಮೇಲಾಗುವ ಪರಿಣಾಮಗಳ ಬಗ್ಗೆ ಇಲಾಖೆ ಗಂಭೀರವಾಗಿ ಯೋಚಿಸಬೇಕು ಎಂದು ಪೋಷಕರು ಆಗ್ರಹಿಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv