ಬೆಂಗ್ಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್‍ರೇಪ್

Public TV
0 Min Read

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮೂವರು ಯುವಕರು ಸೇರಿಕೊಂಡು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ಈ ಘಟನೆ ಬೆಂಗಳೂರಿನ ಕಾಡುಗೋಡಿಯಲ್ಲಿ ನಡೆದಿದ್ದು, ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಭಾನುವಾರ ರಾತ್ರಿ ಮೂವರು ಯುವಕರು ಬಾಲಕಿಯನ್ನ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಬಾಲಕಿಯ ಮೇಲೆ ಮೂವರು ಆರೋಪಿಗಳು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಈ ಘಟನೆಯ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಸಾರ್ವಜನಿಕರ ಮಾಹಿತಿ ಆಧಾರಿಸಿ ಕಾಡುಗೋಡಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ಡೆ ಅಡಿಯಲ್ಲಿ ಕೇಸ್ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *