ಯಾವುದೋ ಒತ್ತಾಸೆಗೆ ಮಣಿದು ಸಿಎಂ ಉತ್ತರ ಕರ್ನಾಟಕಕ್ಕೆ ಹೋಗಿದ್ದಾರೆ : ಯೋಗೇಶ್ವರ್

Public TV
1 Min Read

ರಾಮನಗರ: ನಾನು ಸಿಎಂ ಬಗ್ಗೆ ಟೀಕೆ ಮಾಡುವುದಿಲ್ಲ, ಆದರೆ ಭಾರತೀಯ ಜನತಾ ಪಾರ್ಟಿಯ ಸದಸ್ಯನಾಗಿ ನಾನು ಸಿಎಂ ನಡವಳಿಕೆಯನ್ನು ಖಂಡಿಸುತ್ತೇನೆ ಎಂದು ಮಾಜಿ ಶಾಸಕ ಸಿ.ಪಿ ಯೋಗೇಶ್ವರ್

ಮಾಧ್ಯಮಗಳೊಂದಿಗೆ ಮಾತನಾಡಿದ ಯೋಗೇಶ್ವರ್, ಭಾರತೀಯ ಜನತಾ ಪಾರ್ಟಿಯ ಸದಸ್ಯನಾಗಿ ನಾನು ಸಿಎಂ ನಡವಳಿಕೆಯನ್ನು ಖಂಡಿಸುತ್ತೇನೆ. ಮಾನ್ಯ ಮುಖ್ಯಮಂತ್ರಿ ಅವರಿಗೆ ಉತ್ತರ ಕರ್ನಾಟಕದ ಭಾಗಕ್ಕೆ ಹೋಗುವುದಕ್ಕೆ ಮನಸ್ಸು ಇರಲಿಲ್ಲ. ಆತ್ಮವಿಶ್ವಾಸ ಸಹ ಇರಲಿಲ್ಲ. ಯಾವುದೋ ಒತ್ತಾಸೆಗೆ ಮಣಿದು ಅವರು ಅಲ್ಲಿಗೆ ಹೋಗಿದ್ದಾರೆ ಎಂದು ಎಂದು ಮಾಜಿ ಶಾಸಕ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ.

ಮುಖ್ಯಮಂತ್ರಿಯಾಗಿ ರಾಜ್ಯದ ಆಡಳಿತ ನಡೆಸುವ ಶಕ್ತಿಯನ್ನ ದಿನೇ ದಿನೇ ಕಳೆದುಕೊಳ್ಳುತ್ತಿದ್ದಾರೆ ಎಂದು ಈ ಘಟನೆಯಿಂದ ನಮಗೆ ಅರ್ಥವಾಗುತ್ತದೆ. ಒಂದು ವರ್ಷದ ಬಳಿಕ ಚನ್ನಪಟ್ಟಣ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಮತ್ತೆ ಯಾವಾಗ ಬರುತ್ತಾರೆ ಎಂಬುದನ್ನ ಅವರನ್ನೇ ಕೇಳಬೇಕು ಎಂದರು.

ಸಿಎಂಗೆ ನಾನು ಅಧಿಕಾರ ಕಳೆದುಕೊಳ್ಳುತ್ತೇನೆ ಎಂಬ ಆತಂಕದಲ್ಲಿದ್ದಾರೆ. ಎಲ್ಲರೂ ಅವರ ಬಗ್ಗೆ ಮಾತನಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಭಯವಾಗುತ್ತಿದೆ. ಆದರೆ ನಾನು ಅವರ ಯಾವುದೇ ರೀತಿಯ ಟೀಕೆ ಮಾಡಲು ಹೋಗುವುದಿಲ್ಲ ಎಂದರು. ಇನ್ನೂ ನೀರಾವರಿ ವಿಚಾರದಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ನಾನೇನು ಎಂಜಿನಿಯರ್ ಅಲ್ಲ, ಮುಖ್ಯಮಂತ್ರಿ ಏನು ಬೇಕಾದರೂ ಮಾತನಾಡಬಹುದು. ಅದಕ್ಕೆ ಜನ ಉತ್ತರ ಕೊಡುತ್ತಾರೆ ಎಂದು ಯೋಗೇಶ್ವರ್ ಹೇಳಿದರು.

ಸಿಎಂ ಹೇಳಿದ್ದೇನು?
ಕಳೆದ ದಿನ ಸಿಎಂ ರಾಯಚೂರಿಗೆ ಗ್ರಾಮ ವಾಸ್ತವ್ಯಕ್ಕೆ ಹೋಗಿದ್ದರು. ಈ ವೇಳೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದರು. ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದ್ದರು. ಆಗ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡಬೇಕು ನಿಮಗೆ, ಎಂದು ಹೇಳಿ ಪ್ರತಿಭಟನಾಕಾರರ ಮೇಲೆ ಕೂಗಾಡಿದ್ದರು. ಅಷ್ಟೇ ಅಲ್ಲದೇ ನಾನು ಗ್ರಾಮವಾಸ್ತವ್ಯ ಮಾಡುವುದಿಲ್ಲ ಎಂದು ಹೇಳಿದ್ದರು.

Share This Article
Leave a Comment

Leave a Reply

Your email address will not be published. Required fields are marked *