ಭಯೋತ್ಪಾದನೆ ಮಾನವೀಯತೆಗೆ ಅತೀ ದೊಡ್ಡ ಬೆದರಿಕೆ – ಜಪಾನ್‍ನಲ್ಲಿ ಮೋದಿ

Public TV
1 Min Read

ಒಸಾಕಾ: ಭಯೋತ್ಪಾದನೆ ಮಾನವೀಯತೆಗೆ ಅತಿದೊಡ್ಡ ಬೆದರಿಕೆಯಾಗಿದೆ. ಭಯೋತ್ಪಾದನೆ ಅಮಾಯಕರನ್ನು ಹತ್ಯೆ ಮಾಡುವುದಷ್ಟೇ ಅಲ್ಲದೇ ಸಾಮಾಜಿಕ ಸ್ಥಿರತೆ ಮತ್ತು ಆರ್ಥಿಕ ಅಭಿವೃದ್ಧಿ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಜಪಾನ್‍ನ ಒಸಾಕಾದಲ್ಲಿ ನಡೆದ ಜಿ20 ಶೃಂಗ ಸಭೆಯಲ್ಲಿ ಭಾಗವಹಿಸಿದ್ದ ಮೋದಿ, ಇಂದು ಬ್ರಿಕ್ಸ್ ದೇಶಗಳ ಮುಖಂಡರ ಜತೆ ಅನೌಪಚಾರಿಕ ಸಭೆಯಲ್ಲಿ ಮಾತನಾಡಿದ ಅವರು, ಭಯೋತ್ಪಾದನೆ ಮತ್ತು ವರ್ಣಭೇದ ನೀತಿಗೆ ಬೆಂಬಲಿಸುವ ಎಲ್ಲ ಶಕ್ತಿಗಳನ್ನು ನಿಯಂತ್ರಿಸಬೇಕಾಗಿದೆ ಎಂದು ಹೇಳಿದ್ದಾರೆ.

ಸಂಪನ್ಮೂಲಗಳ ಕೊರತೆಯಿದೆ ಮೂಲಭೂತ ಸೌಕರ್ಯಗಳಲ್ಲಿ ಹೂಡಿಕೆಗೆ ಬಹುತೇಕ 1.3 ಟ್ರಿಲಿಯನ್ ಡಾಲರ್‍ಗಳ (1,30,000 ಕೋಟಿ) ಕೊರತೆಯಾಗಿದೆ. ಅಭಿವೃದ್ಧಿಯನ್ನು ಸುಸ್ಥಿರಗೊಳಿಸಿ ಎಲ್ಲರನ್ನೂ ಒಳಗೊಳ್ಳಿಸುವುದು ಮತ್ತೊಂದು ಸವಾಲು. ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನಗಳಾದ ಡಿಜಿಟಲೀಕರಣ ಮತ್ತು ಹವಾಮಾನ ಬದಲಾವಣೆಯಿಂದ ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗೆ ಇಂದು ಮಾರಕ ಎಂದು ಮೋದಿ ಹೇಳಿದರು.

ವಿಶ್ವ ವಾಣಿಜ್ಯ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸುವ, ರಕ್ಷಣಾತ್ಮಕ ಧೋರಣೆ ವಿರುದ್ಧ ಹೋರಾಡುವ, ಇಂಧನ ಭದ್ರತೆ ಖಾತ್ರಿಪಡಿಸುವ ಮತ್ತು ಭಯೋತ್ಪಾದನೆ ವಿರುದ್ಧ ಒಗ್ಗೂಡಿ ಹೋರಾಡುವ ಅಗತ್ಯವಿದೆ. ಇಂದು ನಮ್ಮ ಮುಂದಿರುವ ಮೂರು ಪ್ರಮುಖ ಸವಾಲುಗಳ ಬಗ್ಗೆ ನಾನು ಗಮನಹರಿಸುತ್ತೇನೆ. ಮೊದಲನೆಯದಾಗಿ ಜಾಗತಿಕ ಆರ್ಥಿಕತೆಯ ಅಸ್ಥಿರತೆ ಮತ್ತು ಅವನತಿ. ನಿಯಮಗಳ ಆಧಾರಿತ ಬಹುಪಕ್ಷೀಯ ಜಾಗತಿಕ ವ್ಯಾಪಾರ ವ್ಯವಸ್ಥೆಯಲ್ಲಿ ಏಕಪಕ್ಷೀಯವಾದ ಮತ್ತು ಸ್ಪರ್ಧಾತ್ಮಕತೆಗಳ ಪರಸ್ಪರ ವಿರೋಧಾಭಾಸ ಸೃಷ್ಟಿಸುತ್ತಿವೆ ಎಂದು ಹೇಳಿದ್ದಾರೆ.

ಇದೇ ವೇಳೆ ಬ್ರೆಜಿಲ್ ಅಧ್ಯಕ್ಷರಾಗಿ ಚುನಾಯಿತರಾದ ಜೈರ್ ಬೊಲ್ಸೊನಾರೊ ಅವರಿಗೆ ಅಭಿನಂದನೆ ಸಲ್ಲಿಸಿದರು. ಅಲ್ಲದೆ ಬ್ರಿಕ್ಸ್ ಕುಟುಂಬಕ್ಕೆ ಅವರನ್ನು ಸ್ವಾಗತಿಸಿದರು. ಬ್ರಿಕ್ಸ್ (ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ) ಮುಖಂಡರ ಸಭೆ ನಡೆಸಿ, ದಕ್ಷಿಣ ಆಫ್ರಿಕಾ ಅಧ್ಯಕ್ಷರಾಗಿ ಚುನಾಯಿತರಾದ ಸಿರಿಲ್ ರಮಫೋಸಾ ಅವರಿಗೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದರು.

Share This Article
Leave a Comment

Leave a Reply

Your email address will not be published. Required fields are marked *