ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ಪ್ರಿಯಕರನೇ ಪ್ರಿಯತಮೆಯ ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಸಿಂದಗಿ ಬಿ ಗ್ರಾಮದಲ್ಲಿ ನಡೆದಿದೆ.
ಕೊಲೆ ಮಾಡಿದ ಪ್ರಿಯಕರನನ್ನು ಸಿದ್ದು ಎಂದು ಗುರುತಿಸಲಾಗಿದ್ದು, ಕೊಲೆಯಾದ ಪ್ರಿಯತಮೆಯನ್ನು 31 ವರ್ಷದ ಮಲ್ಲಮ್ಮ ಎಂದು ಗುರುತಿಸಲಾಗಿದೆ. ಆರೋಪಿ ಸಿದ್ದುವನ್ನು ಪೊಲೀಸರು ಬಂಧಿಸಿದ್ದಾರೆ.
ಮಲ್ಲಮ್ಮ ಆಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿದ್ದ ಸಿದ್ದು ತನ್ನ ಪ್ರಿಯತಮೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಸಂಬಂಧ ಮಾದನಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.