ವಿಡಿಯೋದ ತಪ್ಪು ವ್ಯಾಖ್ಯಾನ ನೀಡಿ ಬಿಜೆಪಿ ವಿಕೃತಾನಂದ: ಸಿದ್ದರಾಮಯ್ಯ

Public TV
2 Min Read

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರು ತಮ್ಮ ಮನೆಯಲ್ಲಿ ಆಪ್ತರೊಂದಿಗೆ ಮಾತನಾಡಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ವಿಡಿಯೋಗೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡುವುದರ ಜೊತೆಗೆ ಬಿಜೆಪಿ ನಾಯಕರ ವಿರುದ್ಧ ಗುಡುಗಿದ್ದಾರೆ.

ಭಾನುವಾರ ವಿಪಕ್ಷ ನಾಯಕ ಸಿದ್ದರಾಮಯ್ಯ, ಹುಣಸೂರು ಮಂಜುನಾಥ್ ಮತ್ತು ಪಿರಿಯಾಪಟ್ಟಣದ ವೆಂಕಟೇಶ್ ಮಾತನಾಡಿರುವ ವಿಡಿಯೋ ಹೊರ ಬಂದಿತ್ತು. ವಿಡಿಯೋದಲ್ಲಿ ಸಿದ್ದರಾಮಯ್ಯನವರು ತಮ್ಮದೇ ಜಾತಿ ಸಮೀಕರಣದಲ್ಲಿ ತೊಡಗಿಕೊಂಡಿದ್ದರು. ಇದರ ಜೊತೆಗೆ ಡಿಕೆ ಶಿವಕುಮಾರ್ ಜೆಡಿಎಸ್ ಬಾವುಟ ಹಿಡಿದುಕೊಂಡಿರುವ ಬಗ್ಗೆಯೂ ಮಾತನಾಡಲಾಗಿತ್ತು. ವಿಡಿಯೋ ಹೊರ ಬಂದ ಬಳಿಕ ಡಿಕೆ ಶಿವಕುಮಾರ್ ಮೇಲೆ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರಾ ಎಂಬಿತ್ಯಾದಿ ಪ್ರಶ್ನೆಗಳು ಹುಟ್ಟಿಕೊಂಡಿದ್ದವು. ಈ ಕುರಿತು ಸಿದ್ದರಾಮಯ್ಯನವರು ಇಂದು ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಟ್ವೀಟ್ 1: ನನ್ನ ಮನೆಯಲ್ಲಿ ನಡೆದ ಖಾಸಗಿ ಮಾತುಕತೆಯ ವಿಡಿಯೋದ ತಪ್ಪು ವ್ಯಾಖ್ಯಾನವನ್ನು ಬಿಜೆಪಿ ನಾಯಕರು ಪ್ರಚಾರ ಮಾಡುತ್ತಾ ವಿಕೃತಾನಂದಪಡುತ್ತಿದ್ದಾರೆ. ಇದು ನನಗೆ ಹೊಸತಲ್ಲ. ಈ ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತೆ. ನನ್ನ ರಾಜಕೀಯ ವಿರೋಧಿಗಳಿಗೆ ಇದೇ ನನ್ನ ದೀಪಾವಳಿ ಸಂದೇಶ.  ಇದನ್ನೂ ಓದಿ: ಸಿದ್ದರಾಮಯ್ಯರ ಮೇಲೆ ನಂಬಿಕೆ ಇದೆ, ಅವ್ರು ಆ ರೀತಿ ಹೇಳಿರಲ್ಲ: ಡಿಕೆಶಿ ತಿರುಗೇಟು

ಟ್ವೀಟ್ 2: ನಾನು ಜಾತಿವಾದಿ ಅಲ್ಲ, ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿರುವ ನಾನು ಅಂಬೇಡ್ಕರ್, ಗಾಂಧೀಜಿ, ಬಸವಣ್ಣ ಮತ್ತು ಕುವೆಂಪು ಅವರ ಚಿಂತನೆಯಿಂದ ಪ್ರೇರಿತನಾದ ಜಾತ್ಯಾತೀತ. ಅವರ ಚಿಂತನೆಗಳ ಫಲವೇ ನನ್ನ ಸರ್ಕಾರದ ಯೋಜನೆಗಳಾಗಿದ್ದವು. ಇದು ನನ್ನ ಜಾತಿವಿನಾಶದ ಹಾದಿ. ನಿಮ್ಮದು ಯಾವ ಹಾದಿ? ಇದನ್ನೂ ಓದಿ: ಸಿದ್ದರಾಮಯ್ಯಗೆ ನನ್ನ ಮೇಲೆ ಅಪಾರ ಪ್ರೀತಿಯಿದೆ: ಡಿಕೆಶಿ

ಟ್ವೀಟ್ 3: ನಾನು ಜಾತಿ ರಾಜಕೀಯ ಮಾಡುತ್ತಿದ್ದೇನೆ ಎಂದು ಆರೋಪಿಸುವವರು ಅವರ ಪಕ್ಷಗಳ ನೀತಿ ಮತ್ತು ಕಾರ್ಯಕ್ರಮಗಳಲ್ಲಿ ಗಾಂಧಿ ಅಂಬೇಡ್ಕರ್, ಬಸವಣ್ಣ ಮತ್ತು ಕುವೆಂಪು ವಿಚಾರಧಾರೆಗಳೆಷ್ಟು ಇವೆ ಎನ್ನುವುದನ್ನು ಬಹಿರಂಗ ಪಡಿಸಲಿ. ಇದರ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧ. ಇದು ನನ್ನ ಸವಾಲು ಕೂಡ ಹೌದು. ಇದನ್ನೂ ಓದಿ: ಜೆಡಿಎಸ್ ಬಾವುಟ ಹಿಡಿದಿದ್ದಕ್ಕೆ ಯಾವುದೇ ಅರ್ಥ ಕಲ್ಪಿಸಬೇಕಾದ ಅಗತ್ಯವಿಲ್ಲ: ಹೆಚ್‍ಡಿಕೆ

ಟ್ವೀಟ್ 4: ರಾಜ್ಯದ ಮತದಾರರು ಜಾತಿ ಬಿಟ್ಟು ಯೋಚನೆ ಮಾಡುತ್ತಿದ್ದಾರೆ, ಲಿಂಗಾಯತರು ಯಡಿಯೂರಪ್ಪನವರಿಂದ, ಒಕ್ಕಲಿಗರು ಜೆಡಿಎಸ್ ಪಕ್ಷದಿಂದ ದೂರವಾಗುತ್ತಿದ್ದಾರೆ ಎಂಬ ಗೆಳೆಯರ ಮಾತಿಗೆ ನಾನು ಸಹಮತ ಸೂಚಿಸಿದ್ದು ನಿಜ. ಜನ ಜಾತ್ಯತೀತರಾಗುತ್ತಿದ್ದಾರೆ ಎಂದು ಹೇಳಿದ್ದರಲ್ಲಿ ಏನು ತಪ್ಪಿದೆ?

ಟ್ವೀಟ್ 5: ರಾಜಕೀಯ ಪಕ್ಷಗಳು ನೈತಿಕವಾಗಿ ದಿವಾಳಿಯಾದಾಗ ಇಂತಹ ಅಪಸವ್ಯಗಳು ಹುಟ್ಟಿಕೊಳ್ಳುತ್ತವೆ. ವೈಯಕ್ತಿಕ ದಾಳಿಗಳು ನನ್ನ ಸಾಮಾಜಿಕ ಬದ್ಧತೆಯನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಮತ್ತು ಜನರಿಗಾಗಿ ಹೋರಾಡುವ ಹುಮ್ಮಸ್ಸನ್ನು ಇಮ್ಮಡಿಗೊಳಿಸುತ್ತದೆ. ಇದಕ್ಕಾಗಿ ನನ್ನ ರಾಜಕೀಯ ವಿರೋಧಿಗಳಿಗೆ ಧನ್ಯವಾದಗಳು. ಇದನ್ನೂ ಓದಿ: ದೋಸ್ತಿ ಮುಗಿದ ಮೇಲೆ ಇವರಿಗ್ಯಾಕೆ ಅವ್ರ ಉಸಾಬರಿ: ಡಿಕೆಶಿ ವಿರುದ್ಧ ಸಿದ್ದರಾಮಯ್ಯ ಕಿಡಿ

Share This Article
Leave a Comment

Leave a Reply

Your email address will not be published. Required fields are marked *