ಮತ ಎಣಿಕೆಗೆ ಸಕಲ ಸಿದ್ಧತೆ – ಕೆಆರ್‌ಪೇಟೆಯಲ್ಲಿ 144 ಸೆಕ್ಷನ್ ಜಾರಿ

Public TV
1 Min Read

ಮಂಡ್ಯ: ರಾಜ್ಯದಲ್ಲಿ ಕುತೂಹಲ ಮೂಡಿಸಿರುವ ಉಪಚುನಾವಣೆಯ ಫಲಿತಾಂಶಕ್ಕೆ ಕೌಂಡ್‍ಟೌನ್ ಶುರುವಾಗಿದೆ. ಅದಕ್ಕಾಗಿ ಮಂಡ್ಯದಲ್ಲಿ ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.

ಸೋಮವಾರ 15 ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಕೆಆರ್‌ಪೇಟೆ ಉಪಚುನಾವಣೆಯ ಮತ ಎಣಿಕೆ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜರುಗಲಿದೆ. ಈಗಾಗಲೇ ಸೋಮವಾರ ನಡೆಯುವ ಮತ ಎಣಿಕೆ ಪ್ರಕ್ರಿಯೆಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸಕಲ ವ್ಯವಸ್ಥೆಗಳನ್ನು ಮಾಡಿಕೊಂಡಿದೆ.

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿರುವ ಮತ ಎಣಿಕೆಗೆ ಸಕಲ ಸಿದ್ಧತೆಗಳ ಜೊತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಾಳೆ ಪಾಲಿಟೆಕ್ನಿಕ್ ಕಾಲೇಜಿನ ಒಂದು ಕೊಠಡಿಯಲ್ಲಿ ಮತ ಎಣಿಕೆ ಪ್ರಕ್ರಿಯೆ ಬೆಳಗ್ಗೆ 8 ಗಂಟೆಗೆ ಆರಂಭಗೊಳ್ಳಲಿದೆ. 18 ಸುತ್ತುಗಳಲ್ಲಿ ನಡೆಯಲಿರುವ ಮತ ಎಣಿಕೆ 18 ಟೇಬಲ್‍ಗಳಲ್ಲಿ ನಡೆಯಲಿದೆ. ಇದಕ್ಕಾಗಿ 60 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.

ಇದಲ್ಲದೇ ಭದ್ರತೆ ದೃಷ್ಟಿಯಿಂದಾಗಿ ಕೆಆರ್‌ಪೇಟೆ ಕ್ಷೇತ್ರ ವ್ಯಾಪ್ತಿಯಲ್ಲಿ 144 ಸೆಕ್ಷನ್‍ನ್ನು ಜಾರಿಗೊಳಿಸಲಾಗಿದೆ. ಫಲಿತಾಂಶದ ಬಳಿಕ ಯಾರು ಕೂಡ ವಿಜಯೋತ್ಸವ, ಮೆರವಣಿಗೆ, ಸಂಭ್ರಮಾಚರಣೆಗೆ ನಿಷೇಧ ಏರಲಾಗಿದೆ. ಇದಲ್ಲದೇ ಕೆಆರ್‌ಪೇಟೆ ಪಟ್ಟಣದ ವ್ಯಾಪ್ತಿಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಜೊತೆಗೆ ಕ್ಷೇತ್ರ ವ್ಯಾಪ್ತಿಯಲ್ಲಿ ಇರುವ ಸೂಕ್ಷ್ಮ ಪ್ರದೇಶಗಳಲ್ಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *