ದಾವಣಗೆರೆಯಲ್ಲಿ ರಾಷ್ಟ್ರಗೀತೆ ಹಾಡಿ ಪ್ರತಿಭಟನೆ ಹಿಂಪಡೆದ NSUI

Public TV
1 Min Read

ದಾವಣಗೆರೆ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿರುವುದನ್ನು ವಿರೋಧಿಸಿ ಎನ್‍ಎಸ್‍ಯುಐ ಸಂಘಟನೆಯ ಕಾರ್ಯಕರ್ತರು ನಗರದ ಜಯದೇವ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಬೇಕೆಂದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಜಾತಿ ಆಧಾರದ ಕಾನೂನನ್ನು ವಿರೋಧಿಸುತ್ತೇವೆ. ಅಮಿತ್ ಶಾ ಅವರ ಎನ್‍ಆರ್‍ಸಿಯನ್ನು ವಿರೋಧಿಸುತ್ತೇವೆ. ಕೇಂದ್ರ ಸರ್ಕಾರ ದೇಶವಿರೋಧಿ, ರೈತ ವಿರೋಧಿ ಸರ್ಕಾರವಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವುದರಿಂದ ದೇಶದಲ್ಲಿ ಅಶಾಂತಿಯನ್ನುಂಟು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‍ಆರ್‍ಸಿಯನ್ನು ಹಿಂಪಡೆಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಜನತೆ ಆರ್ಥಿಕ ಹಾಗೂ ಸಾಂಸ್ಕೃತಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಸಮಸ್ಯೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ ಧಕ್ಕೆ ತರುವ ಹುನ್ನಾರವನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮೂಲಕ ದೇಶ ವಿಭಜನೆಯಾಗುತ್ತಿದೆ. 1985 ರಲ್ಲಿ ನಡೆದ ಅಸ್ಸಾಂ ಒಪ್ಪಂದವನ್ನು ಸಿಎಎ ಉಲ್ಲಂಘಿಸುತ್ತಿದೆ ಎಂದು ಅಸ್ಸಾಂ ಸೇರಿದಂತೆ ಈಶಾನ್ಯ ಭಾಗದ ರಾಜ್ಯಗಳು ವಿರೋಧಿಸುತ್ತಿವೆ. ಭಾರತದ ರಾಷ್ಟ್ರತ್ವದ ಮೂಲ ಮೌಲ್ಯಗಳಿಗೆ ಅದು ವ್ಯತಿರಿಕ್ತವಾಗಿದೆ ಎಂದು ದೇಶದೆಲ್ಲೆಡೆ ಪ್ರತಿರೋಧ ವ್ಯಕ್ತವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಂತರ ರಾಷ್ಟ್ರಗೀತೆ ಹಾಡುವುದರ ಮೂಲಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

Share This Article
Leave a Comment

Leave a Reply

Your email address will not be published. Required fields are marked *