ಅಪ್ರಾಪ್ತೆ ಮೇಲೆ ಅತ್ಯಾಚಾರ – 20 ವರ್ಷ ಜೈಲು ಶಿಕ್ಷೆ

Public TV
1 Min Read

ಚಿಕ್ಕಬಳ್ಳಾಪುರ: 7 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಸತ್ರ ನ್ಯಾಯಾಲಯ ಅದೇಶ ಮಾಡಿದೆ.

ಜುಲೈ 31ರ 2019 ರಂದು 7 ವರ್ಷದ ಬಾಲಕಿಗೆ ಊಟ ಕೊಡಿಸುವುದಾಗಿ ನಂಬಿಸಿ, ಕರೆದುಕೊಂಡು ಹೋಗಿದ್ದ, ಗುಡಿಬಂಡೆ ತಾಲೂಕಿನ ಬಾಲೇನಹಳ್ಳಿಯ ಸತೀಶ್ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ.

ಈ ಸಂಬಂಧ ಚಿಕ್ಕಬಳ್ಳಾಪುರ 1ನೇ ಹೆಚ್ಚುವರಿ ನ್ಯಾಯಾಧೀಶರಾದ ನಟರಾಜ್ ರವರು ಅಪರಾಧಿ ಸತೀಶ್ ಗೆ 20 ವರ್ಷ ಕಠಿಣ ಸಜೆ ವಿಧಿಸಿ ಆದೇಶಿಸಿ, 10000 ರೂಪಾಯಿ ದಂಡ ವಿಧಿಸಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಈ ಪ್ರಕರಣ ದಾಖಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *