ಬಿಎಸ್‍ವೈ ಬಳಿ ಡಿಸಿಎಂ ಸ್ಥಾನದ ಕೇಳಿದ್ದು ನಿಜ: ಶ್ರೀರಾಮುಲು

Public TV
1 Min Read

– ಯಡಿಯೂರಪ್ಪರನ್ನ ಮುಜುಗರಕ್ಕೆ ಗುರಿ ಮಾಡಲ್ಲ

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾನು ಬಳಿ ಡಿಸಿಎಂ ಸ್ಥಾನದ ಬಗ್ಗೆ ಕೇಳಿರುವುದು ನಿಜ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದಗಳೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಅವರು ಸಂಪುಟ ವಿಸ್ತರಣೆ ತೀರ್ಮಾನ ತೆಗೆದುಕೊಳ್ಳಲು ಸಮರ್ಥರಿದ್ದಾರೆ. ಸೂಕ್ತ ಸಂದರ್ಭದಲ್ಲಿ ಸೂಕ್ತ ಸ್ಥಾನಮಾನ ನೀಡುತ್ತಾರೆ ಎಂಬ ವಿಶ್ವಾಸವಿದೆ ನನಗಿದೆ. ನಾನು ಅವರೊಟ್ಟಿಗೆ ಹೋರಾಟ ಮಾಡಿಕೊಂಡು ಬಂದವನು. ಅವರಿಗೆ ಮುಜುಗರ ಉಂಟು ಮಾಡಲು ಬಯಸುವುದಿಲ್ಲ. ಅವರು ಯಾವುದೇ ಸ್ಥಾನ ನೀಡುದರೂ ಅದನ್ನ ಸ್ವೀಕರಿಸುತ್ತೇನೆ ಎಂದರು.

ಇದೇ ವೇಳೆ ತಮಗೆ ಡಿಸಿಎಂ ಸ್ಥಾನ ನೀಡುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಶ್ರೀರಾಮುಲು, ಮುಖ್ಯಮಂತ್ರಿಗಳು ನಿಮ್ಮ ಜಿಲ್ಲೆಯವರೇ ನೀವೇ ಅವರನ್ನು ಕೇಳಬೇಕು ಎಂದು ಹಾಸ್ಯ ಚಟಾಕಿ ಹಾರಿಸಿದರು.

ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮುಖ್ಯಮಂತ್ರಿಗಳು ಎಲ್ಲರನ್ನೂ ಸಮಾಧಾನಪಡಿಸುವ ಪ್ರಯತ್ನದಲ್ಲಿದ್ದಾರೆ. ಅವರ ಮೇಲೆ ತೀವ್ರ ಒತ್ತಡ ಹಾಕುವುದು ಸರಿಯಲ್ಲ. ಸೂಕ್ತ ಸಂದರ್ಭದಲ್ಲಿ ಎಲ್ಲರಿಗೂ ಸರಿಯಾದ ಸ್ಥಾನಮಾನ ಸಿಗುವ ವಿಶ್ವಾಸವಿದೆ. ಸಿಎಂ ಯಡಿಯೂರಪ್ಪ ಅವರು ಎಲ್ಲರನ್ನೂ ಸಮಾಧಾನ ಮಾಡುತ್ತಿದ್ದಾರೆ. ಅವರೊಂದಿಗೆ ನಾವು ಎಲ್ಲರೂ ನಿಲ್ಲಬೇಕು ಎಂದು ಹೇಳಿದರು.

ಕೊರೊನಾ ವೈರಸ್:
ಕೊರೋನಾ ವೈರಸ್ ಸಂಬಂಧ ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲಾಗಿದ್ದು, ಕೇರಳದಿಂದ ಮಂಗಳೂರು ಕಡೆಗೆ ಬರುವವರರನ್ನು ತಪಾಸಣೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಈಗಾಗಲೇ 97 ಜನರಿಗೆ ರಕ್ತ ಮಾದರಿ ಪರೀಕ್ಷೆ ನಡೆಸಲಾಗಿದೆ. ಎಲ್ಲರ ರಕ್ತದ ಮಾದರಿ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದು, ಯಾವುದೇ ಆತಂಕವಿಲ್ಲ ಎಂದು ತಿಳಿಸಿದರು.

ಪ್ರತಿ ಜಿಲ್ಲೆ ಮತ್ತು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹತ್ತು ಹಾಸಿಗೆಯ ವಿಶೇಷ ವಾರ್ಡ್ ತೆರೆಯಲು ಸೂಚಿಸಲಾಗಿದೆ. ಅದರಂತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇದಕ್ಕಾಗಿ ವಿಶೇಷ ವಾರ್ಡ್ ತೆರೆಯಲು ಆದೇಶಿಸಿರುವೆ. ಪ್ರತಿ ಗ್ರಾಮಗಳಲ್ಲಿ ಈ ಬಗ್ಗೆ ಪ್ರಚಾರ ಮಾಡಲು ಎಲ್ಲಾ ಜಿಲ್ಲೆಗಳಿಗೆ ಎಲ್‍ಇಡಿ. ವಾಹನ ಕಳಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *