ಎರಡನೇ ಮಗು ಪಡೆಯಲು 5 ವರ್ಷದಿಂದ ಪ್ರಯತ್ನಿಸುತ್ತಿದ್ದೆ: ಶಿಲ್ಪಾ ಶೆಟ್ಟಿ

Public TV
3 Min Read

ಮುಂಬೈ: ಕುಡ್ಲದ ಬೆಡಗಿ ಶಿಲ್ಪಾ ಶೆಟ್ಟಿ 44ನೇ ವಯಸ್ಸಿನಲ್ಲಿ ಬಾಡಿಗೆ ತಾಯಿಯ ಮೂಲಕ ಹೆಣ್ಣು ಮಗುವಿಗೆ ತಾಯಿ ಆಗಿದ್ದಾರೆ. ಇದೀಗ ಎರಡನೇ ಮಗು ಪಡೆಯಲು 5 ವರ್ಷದಿಂದ ಪ್ರಯತ್ನಿಸುತ್ತಿದ್ದೆ ಎಂದು ಶಿಲ್ಪಾ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.

2009ರಲ್ಲಿ ನನ್ನ ಹಾಗೂ ರಾಜ್ ಕುಂದ್ರಾ ಮದುವೆ ನಡೆಯಿತು. 2012ರಲ್ಲಿ ನಮ್ಮ ಜೀವನದಲ್ಲಿ ಮಗ ವಿಹಾನ್ ಆಗಮಿಸಿದ. ವಿಹಾನ್ ಆಗಮನದಿಂದ ನಾವೆಲ್ಲರೂ ತುಂಬಾ ಖುಷಿಯಾಗಿದ್ದೇವು. ಆದಾದ ಬಳಿಕ ನಾವು ಪ್ಲಾನಿಂಗ್ ಮಾಡುತ್ತಿದ್ದೆವು. ಮತ್ತೊಂದು ಮಗು ಪಡೆಯಲು ನಾನು 5 ವರ್ಷ ಪ್ರಯತ್ನಿಸುತ್ತಿದ್ದೆ. ನಾನು ‘ನಿಕಮ್ಮಾ’ ಹಾಗೂ ‘ಹಂಗಾಮ’ ಚಿತ್ರದ ಚಿತ್ರೀಕರಣವನ್ನು ಸೈನ್ ಮಾಡಿ ಡೇಟ್ಸ್ ಕೂಡ ನೀಡಿದ್ದೆ. ಬಳಿಕ ನಾವು ಮತ್ತೊಮ್ಮೆ ತಂದೆ-ತಾಯಿ ಆಗುತ್ತಿದ್ದೇವೆ ಎಂಬುದು ಫೆಬ್ರವರಿ ತಿಂಗಳಿನಲ್ಲಿ ತಿಳಿಯಿತು. ಆ ಸಿಹಿ ಸುದ್ದಿ ಸಿಗುತ್ತಿದ್ದಂತೆ ನಾನು ನನ್ನ ಇಡೀ ಕೆಲಸವನ್ನು ಬೇಗ ಮುಗಿಸಲು ಯೋಚಿಸಿದ್ದೆ ಎಂದರು. ಇದನ್ನೂ ಓದಿ:ಹೆಣ್ಣು ಮಗುವಿನ ತಾಯಿಯಾದ ಶಿಲ್ಪಾ ಶೆಟ್ಟಿ

 

View this post on Instagram

 

||Om Shri Ganeshaya Namah|| Our prayers have been answered with a miracle… With gratitude in our hearts, we are thrilled to announce the arrival of our little Angel, ???????????????????????????????? ???????????????????????? ???????????????????????????? Born: February 15, 2020 Junior SSK in the house???? ‘Sa’ in Sanskrit is “to have”, and ‘Misha’ in Russian stands for “someone like God”. You personify this name – our Goddess Laxmi, and complete our family. ⠀⠀⠀⠀⠀⠀⠀⠀⠀ ⠀⠀⠀⠀⠀⠀⠀⠀⠀ ⠀⠀⠀⠀⠀⠀ ~ Please bestow our angel with all your love and blessings????????❤ ~ Ecstatic parents: Raj and Shilpa Shetty Kundra Overjoyed brother: Viaan-Raj Kundra . . . . . . . . . #SamishaShettyKundra ???? #gratitude #blessed #MahaShivratri #daughter #family #love

A post shared by Shilpa Shetty Kundra (@theshilpashetty) on

ಹೆಣ್ಣು ಮಗುವಿನ ತಾಯಿಯಾಗಿರುವ ವಿಷಯವನ್ನು ಶಿಲ್ಪಾ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ತಮ್ಮ ಬೆರಳು ಹಿಡಿದಿರುವ ಮಗಳ ಫೋಟೋವನ್ನು ಹಾಕಿ ಅದಕ್ಕೆ, ಓಂ ಶ್ರೀ ಗಣೇಶಾಯ ನಮಃ. ನಮ್ಮ ಪ್ರಾರ್ಥನೆ ದೇವರಿಗೆ ತಲುಪಿದ್ದು, ಮನೆಗೆ ಆಗಮಿಸಿರುವ ಪುಟ್ಟ ದೇವತೆ ಶಮಿಶಾ ಶೆಟ್ಟಿಯನ್ನು ನಿಮಗೆ ಪರಿಚಯಿಸುತ್ತಿದ್ದೇನೆ. ಜೂ. ಶಿಲ್ಪಾ ಶೆಟ್ಟಿ ಕುಂದ್ರಾ ಫೆಬ್ರವರಿ 15ರಂದು ಜನಿಸಿದ್ದಾಳೆ. ಅಂದ್ರೆ ಸಂಸ್ಕೃತದಲ್ಲಿ ನಮ್ಮವಳು ಮತ್ತು ಮಿಶಾ ಅಂದ್ರೆ ದೇವರ ರೀತಿಯಲ್ಲಿರುವ ಎಂದರ್ಥ. ಹಾಗಾಗಿ ನಮ್ಮ ಮನೆಗೆ ಆಗಮಿಸಿರುವ ಲಕ್ಷ್ಮಿಗೆ ಸಮಿಶಾ ಎಂದು ಹೆಸರಿಟ್ಟಿದ್ದೇವೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ನಮ್ಮ ಮಕ್ಕಳ ಮೇಲಿರಲಿ. ವಿಯಾನ್ ರಾಜ್ ಕುಂದ್ರಾ ಜೊತೆ ಆಡಲು ಪುಟ್ಟ ಸೋದರಿ ಆಗಮಿಸಿದ್ದಾಳೆ ಎಂದು ಬರೆದುಕೊಂಡಿದ್ದರು. ಇದನ್ನೂ ಓದಿ: 13 ವರ್ಷದ ನಂತ್ರ ಬೆಳ್ಳಿತೆರೆಗೆ ಶಿಲ್ಪಾ ಶೆಟ್ಟಿ ಎಂಟ್ರಿ

ಈ ಹಿಂದೆ ಶಿಲ್ಪಾ, 37ನೇ ವರ್ಷದಲ್ಲಿ ನಾನು ತಾಯಿಯಾಗಬೇಕೆಂಬ ಇಚ್ಛೆ ನನ್ನದಾಗಿರಲಿಲ್ಲ. ಸೂಕ್ತ ಸಮಯದಲ್ಲಿ ಮಹಿಳೆ ತಾಯ್ತನದ ಅನುಭವ ಪಡೆಯಬೇಕು. ಆದರೆ ನನಗೆ ರಾಜ್ ಕುಂದ್ರಾ ಸರಿಯಾದ ಸಮಯದಲ್ಲಿ ಸಿಗದಿದ್ದಕ್ಕೆ 37ನೇ ವಯಸ್ಸಿನಲ್ಲಿ ತಾಯಿಯಾದೆ ಎಂದು ಹೇಳಿಕೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *